ಬೈಕ್ ಗೆ ಕಾರು ಢಿಕ್ಕಿ; ಯುವಕ ಮೃತ್ಯು, ಇನ್ನೋರ್ವನಿಗೆ ಗಾಯ

-ಹಿಸಾಮುದ್ದೀನ್ ಶರೀಫ್ (30) ಮೃತರು.

ಭಟ್ಕಳ;ಬೈಕ್ ಮತ್ತು ಕಾರಿನ‌ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಭಟ್ಕಳದ ಸಾಗರಸ್ತೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಮೃತ ವ್ಯಕ್ತಿಯನ್ನು ಭಟ್ಕಳದ ಉಸ್ಮನಿಯ ಕಾಲನಿ ನಿವಾಸಿ ಹಿಸಾಮುದ್ದೀನ್ ಶರೀಫ್ (30) ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಬೈಕ್ ನ ಹಿಂಬದಿ ಸವಾರ ಮೊಹಮ್ಮದ್ ಕುತುಬ್ (20) ಗಾಯಗಳಾಗಿದೆ.ಅವರನ್ನು ಕುಂದಾಪುರದ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

ಆರು ಜನ ಸ್ನೇಹಿತರು 3 ಬೈಕ್ ಗಳಲ್ಲಿ ಸಾಗರ ರಸ್ತೆಯ ಕಡೆ ತೆರಳುವಾಗ ಕುಂದಾಪುರ ನಂಬರ್ ಪ್ಲೇಟ್ ಇರುವ ಟೂರಿಸ್ಟ್ ಕಾರು ಬೈಕ್ ಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಟಾಪ್ ನ್ಯೂಸ್

ಪ್ರವೀಣ್ ನೆಟ್ಟಾರು ಪತ್ನಿಗೆ ತೋರಿದ ಮಾನವೀಯತೆ ಫಾಝಿಲ್ & ಮಸೂದ್ ಕುಟುಂಬಕ್ಕೆ ತೋರಿಸುತ್ತಾರ ಸಿದ್ದರಾಮಯ್ಯ?ಬಿಜೆಪಿ ಅವಧಿಯಲ್ಲಿ ಹತ್ಯೆಯಾದ ಯುವಕರಿಬ್ಬರ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲಿ‌ ಕಾಂಗ್ರೆಸ್ಸಿಗರು ಮೌನ?

BIG NEWS ತೀವ್ರಗೊಂಡ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆ, ನೂತನ ಸಂಸತ್ ಭವನಕ್ಕೆ ಮೆರವಣಿಗೆ ತೆರಳಲು ಯತ್ನ; ಸಾಕ್ಷಿ ಮಲಿಕ್, ವಿನೇಶ್ ಪೋಗಟ್ ಸೇರಿ ಹಲವರು ವಶಕ್ಕೆ

ನವದೆಹಲಿ;ನೂತನ ಸಂಸತ್​ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿದ್ದಾರೆ.

Developed by eAppsi.com