ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ; ಗೆಳತಿಯ ಸಾವಿಗೆ ನೊಂದು ದುಡುಕಿನ ನಿರ್ಧಾರ ತೆಗೆದುಕೊಂಡ ಯುವಕ?

ಬ್ರಹ್ಮಾವರ:ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ಸಮೀಪದ ನೀಲಾವರ ಬಾವಲಿಕುದ್ರುವಿನಲ್ಲಿ ನಡೆದಿದೆ.

ಬಾವಲಿಕುದ್ರು ನಿವಾಸಿ ಪುತ್ರ ಸುಜಿತ್ ಡೇವಿಡ್ ಡಿಸೋಜಾ (21)ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ.

ಸುಜಿತ್ 2 ನೇ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿದ್ದು, ಅವನು ಪ್ರೀತಿಸುತ್ತಿದ್ದ ಬಾಲಕಿ ಕೆಲ ದಿನಗಳ ಹಿಂದೆ ಮೃತಪಟ್ಟಿದ್ದಳು.

ಇದೇ ವಿಚಾರಕ್ಕೆ ಮನನೊಂದು ಸುಜಿತ್ ಮನೆಯಲ್ಲಿ ನೇಣು ಹಾಕಿಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್