ಬೈಕ್ ಗೆ ಲಾರಿ ಢಿಕ್ಕಿ; ಇಬ್ಬರು ವಿದ್ಯಾರ್ಥಿಗಳು ಮೃತ್ಯು
ತುಮಕೂರು;ಬೈಕ್ & ಲಾರಿ ನಡುವೆ ಅಪಘಾತ ಸಂಭವಿಸಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಸಾಗರನಹಳ್ಳಿ ಗೇಟ್ ಬಳಿ ನಡೆದಿದೆ.
ವಿದ್ಯಾರ್ಥಿಗಳಾದ ಯಶಸ್ವಿನಿ,ಅಭಿಲಾಶ್ ಮೃತರು ಎಂದು ಗುರುತಿಸಲಾಗಿದೆ.ಮೃತ ವಿದ್ಯಾರ್ಥಿಗಳು ಕಾಲೇಜಿನಿಂದ ಬೈಕ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಮೃತ ವಿದ್ಯಾರ್ಥಿಗಳು ದ್ವಿತೀಯ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಾಗಿದ್ದು,ಗುಬ್ಬಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.