ಬೈಕ್ ಅಪಘಾತ;ಇಬ್ಬರು ಯುವಕರು ಸ್ಥಳದಲ್ಲೇ ಸಾವು
ಮಂಡ್ಯ:ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಬೈಕ್ ವೊಂದು ಅಪರಿಚಿತ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಬಳಿ ನಡೆದಿದೆ.
ಬೈಕ್ನಲ್ಲಿದ್ದ ಮಣಿ(25), ಜನಾರ್ದನ ಪೂಜಾರಿ(21) ಸಾವನ್ನಪ್ಪಿದ್ದಾರೆ.
ಮೃತರು ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.ಸ್ಥಳಕ್ಕೆ ಮದ್ದೂರು ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತ ಯುವಕನ ಶವವನ್ನು ಮದ್ದೂರು ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ.
ಬಸ್ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
ಚಿಕ್ಕಬಳ್ಳಾಪುರ:ಸರ್ಕಾರಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ನಾಗರಾಜು(45) ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ
ಮಂಚೇನಹಳ್ಳಿ ತಾಲೂಕಿನ ಹೊನ್ನಪ್ಪನಹಳ್ಳಿ ಗ್ರಾಮದ ಬಳಿ ನಡೆದಿದೆ.
ಮೃತ ಮೃತ ನಾಗರಾಜು ಪತ್ನಿ ಅಪಾಯದಿಂದ ಪಾರಾಗಿದ್ದು,
ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಕುರಿತು ಅಂಬ್ಯುಲೆನ್ಸ್ಗೆ ಮಾಹಿತಿ ನೀಡಿದರೂ, ಗಂಟೆಗಳಾದರೂ ಸ್ಥಳಕ್ಕೆ ಬಂದಿಲ್ಲ ಎಂದು ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ.