ಯುವತಿಯ ಗ್ಯಾಂಗ್ ರೇಪ್ & ಮರ್ಡರ್; ಆರೋಪಿಗಳಲ್ಲಿ ಇಬ್ಬರು ಪೊಲೀಸರು?ಏನಿದು ಶಾಕಿಂಗ್ ಬೆಳೆವಣಿಗೆ?

ಯುವತಿಯ ಗ್ಯಾಂಗ್ ರೇಪ್ & ಮರ್ಡರ್; ಆರೋಪಿಗಳಲ್ಲಿ ಇಬ್ಬರು ಪೊಲೀಸರು?

ಜೈಪುರ:ರಾಜಸ್ಥಾನದ ಬಿಕಾನೇರ್ ಜಿಲ್ಲೆಯಲ್ಲಿ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಮಾಡಲಾಗಿದ್ದು, ಘಟನೆಯಲ್ಲಿನ ಶಂಕಿತ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಮಂಗಳವಾರ ಖಾಜುವಾಲಾ ಪ್ರದೇಶದಲ್ಲಿ 20 ವರ್ಷದ ಯುವತಿಯ ಶವ ಪತ್ತೆಯಾಗಿದೆ ಎಂದು ಪೊಲೀಸ್ ಮಹಾನಿರೀಕ್ಷಕ ಓಂ ಪ್ರಕಾಶ್ ತಿಳಿಸಿದ್ದಾರೆ.

ಖಾಜುವಾಲಾ ಪೊಲೀಸ್ ಠಾಣೆಯ ಇಬ್ಬರು ಕಾನ್ಸ್ಟೆಬಲ್ಗಳು ಸೇರಿದಂತೆ ಮೂವರು ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆಕೆಯ ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

ಇದರ ಬೆನ್ನಲ್ಲೇ ಆರೋಪಿತ ಪೊಲೀಸರನ್ನು ಅಮಾನತು ಮಾಡಲಾಗಿದೆ. ಸಂತ್ರಸ್ತೆಯ ಕುಟುಂಬದ ಸದಸ್ಯರು ಮರಣೋತ್ತರ ಪರೀಕ್ಷೆ ನಡೆಸಲು ಒಪ್ಪಿಗೆ ನೀಡಲು ನಿರಾಕರಿಸಿದ್ದಾರೆ ಮತ್ತು ಎಲ್ಲಾ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿದ್ದಾರೆ.

ಗ್ಯಾಂಗ್ ರೇಪ್ ರಿದಂತೆ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಖಜುವಾಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಪೊಲೀಸರಾದ ಮನೋಜ್ ಮತ್ತು ಭಗೀರಥ ಮೂರನೇ ಆರೋಪಿಯೊಂದಿಗೆ ಯುವತಿಯನ್ನು ಮನೆಗೆ ಕರೆದೊಯ್ದು ಅಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿ, ಕೊಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಸಂತ್ರಸ್ತೆ ಮತ್ತು ಆರೋಪಿಗಳು ಪರಸ್ಪರ ಪರಿಚಿತರು ಎಂದು ಕರೆ ದಾಖಲೆಗಳನ್ನು ಉಲ್ಲೇಖಿಸಿ ಪೊಲೀಸರು ತಿಳಿಸಿದ್ದಾರೆ.ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

ಟಾಪ್ ನ್ಯೂಸ್