ಬಿಲ್ಕೀಸ್ ಬಾನು ಪ್ರಕರಣದ 11 ಆರೋಪಿಗಳು ಮತ್ತೆ ಜೈಲಿಗೆ?
ನವದೆಹಲಿ;ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 11 ಅಪರಾಧಿಗಳಿಗೆ ಗುಜರಾತ್ ಸರ್ಕಾರ ವಿನಾಯತಿ ನೀಡಿ ಬಿಡುಗಡೆ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ.
ಸಿಪಿಐ(ಎಂ) ಪಾಲಿಟ್‌ಬ್ಯುರೊ ಸದಸ್ಯೆ ಸುಭಾಷಿಣಿ ಅಲಿ, ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಮತ್ತು ಮಹಿಳಾ ಹಕ್ಕುಗಳ ಕಾರ್ಯಕರ್ತರು ಸಲ್ಲಿಸಿರುವ ಅರ್ಜಿಗಳನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಮಂಗಳವಾರ ಒಪ್ಪಿಗೆ ನೀಡಿತ್ತು.
ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ಪೀಠವು ಪ್ರಕರಣದಲ್ಲಿ ಅಪರಾಧಿಗಳ ಬಿಡುಗಡೆ ಮತ್ತು ಅದರ ಪರಿಣಾಮದ ಬಗ್ಗೆ ವಿಚಾರಣೆ ನಡೆಸಲಿದೆ.
ಗರ್ಭಿಣಿಯಾಗಿದ್ದಾಗ ಬಿಲ್ಕಿಸ್ ಬಾನು ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬ 7 ಸದಸ್ಯರ ಕೊಲೆ ಆರೋಪದ ಮೇಲೆ ಜನವರಿ 2008 ರಲ್ಲಿ ಮುಂಬೈನ ಸಿಬಿಐ ನ್ಯಾಯಾಲಯವು ಪ್ರಕರಣದ ಹನ್ನೊಂದು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.ನಂತರ ಈ ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ಎತ್ತಿ ಹಿಡಿದಿತ್ತು.ಈ ಬಾರಿ ಸ್ವಾತಂತ್ರ್ಯದ ವೇಳೆ ಎಲ್ಲಾ ಆರೋಪಿಗಳನ್ನು ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಲಾಗಿತ್ತು.