ಸರಕಾರಿ ಕಾರ್ಯಕ್ರಮದ ವೇದಿಕೆಯಲ್ಲಿ ಬಿಜೆಪಿ ಸಂಸದ, ಶಾಸಕರ ಜೊತೆ ವೇದಿಕೆಯಲ್ಲಿದ್ದ ಬಿಲ್ಕೀಸ್ ಬಾನು ರೇಪ್ ಪ್ರಕರಣದ ಅಪರಾಧಿ!

ಗುಜರಾತ್ ಗಲಭೆ ವೇಳೆ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದ ಇತ್ತೀಚೆಗೆ ಬಿಡುಗಡೆಗೊಂಡಿರುವ ಅಪರಾಧಿ ಗುಜರಾತ್‌ನಲ್ಲಿ ನಡೆದ ಅಧಿಕೃತ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ದಾಹೋಡ್ ಜಿಲ್ಲೆಯ ಕರ್ಮಾಡಿ ಗ್ರಾಮದಲ್ಲಿ ಅತ್ಯಾಚಾರ ಪ್ರಕರಣದ ಅಪರಾಧಿ ಬಿಜೆಪಿ ಸಂಸದ ಮತ್ತು ಶಾಸಕರ ಜೊತೆ ವೇದಿಕೆ ಹಂಚಿಕೊಂಡಿರುವುದು ಕಂಡುಬಂದಿದೆ.

ದಾಹೋಡ್ ಜಿಲ್ಲೆಯ ಕರ್ಮಾಡಿ ಗ್ರಾಮದಲ್ಲಿ ನೀರು ಸರಬರಾಜು ಯೋಜನೆ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದಲ್ಲಿ ಶೈಲೇಶ್ ಚಿಮನ್‌ಲಾಲ್ ಭಟ್ ದಾಹೋದ್ ಸಂಸದ ಜಸ್ವಂತ್ ಸಿನ್ ಭಭೋರ್ ಮತ್ತು ಅವರ ಸಹೋದರ ಲಿಮ್ಖೇಡಾ ಶಾಸಕ ಸೈಲೇಶ್ ಭಭೋರ್ ವೇದಿಕೆ ಹಂಚಿಕೊಂಡಿದ್ದಾರೆ.

ಇವರ ಬಿಡುಗಡೆಯನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದ್ದು, ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದೆ. ಮನವಿಯನ್ನು ಆಲಿಸಲು ವಿಶೇಷ ಪೀಠವನ್ನು ರಚಿಸಲು ಸುಪ್ರೀಂ ಕೋರ್ಟ್‌ ಒಪ್ಪಿಗೆ ನೀಡಿದೆ.

ಸಾರ್ವಜನಿಕ ಕಾರ್ಯಕ್ರಮದಲ್ಲಿ ಶಾಸಕರು ಮತ್ತು ಸಂಸದರೊಂದಿಗೆ ಬಿಡುಗಡೆಯಾದ ಅಪರಾಧಿ ಫೋಟೊಗಳಿಗೆ ಪೋಸ್ ನೀಡಿದ್ದಾರೆ. ಈ ಬಗ್ಗೆ ತೃಣಮೂಲ ಸಂಸದೆ ಮಹುವಾ ಮೊಯಿತ್ರಾ ಟ್ವೀಟ್ ಮಾಡಿ ಬಿಜೆಪಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಟಾಪ್ ನ್ಯೂಸ್