ಬಿಜೆಪಿ ನಾಯಕನನ್ನು ಅಪಹರಿಸಿ ಕೊಲೆ,ರಾಜಕೀಯ ತಿರುವು ಪಡೆದುಕೊಂಡ ಪ್ರಕರಣ

ಪಶ್ಚಿಮಬಂಗಾಳ; ಪೂರ್ವ ಮಿಡ್ನಾಪುರ ಜಿಲ್ಲೆಯಲ್ಲಿ ಅಪಹರಣಕ್ಕೊಳಗಾಗಿದ್ದ ಸ್ಥಳೀಯ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಬಿಜೋಯ್ ಭೂಯಾ ಅವರ ಮೃತದೇಹ ಪತ್ತೆಯಾಗಿದೆ ಎಂದು ವರದಿಗಳು ತಿಳಿಸಿವೆ.

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬೆಂಬಲಿತ ಗೂಂಡಾಗಳು ಭೂಯಾ ಅವರನ್ನು ಕೊಂದಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ.

ಸೋಮವಾರ ಸಂಜೆ ಕುಟುಂಬ ಸಮೇತ ಮನೆಗೆ ಹಿಂತಿರುಗುತ್ತಿದ್ದ ಭೂಯಾ ಅವರ ಮೇಲೆ ಕೆಲವರು ಹಲ್ಲೆ ನಡೆಸಿದ್ದಾರೆ. ನಂತರ ಅವರನ್ನು ದುಷ್ಕರ್ಮಿಗಳು ಅಪಹರಿಸಿದ್ದಾರೆ ಎನ್ನಲಾಗಿದೆ. ನಂತರ ಸ್ಥಳೀಯರಿಗೆ ರಸ್ತೆಬದಿಯಲ್ಲಿ ರಕ್ತದ ಮಡುವಿನಲ್ಲಿ ಆತನ ಶವ ಪತ್ತೆಯಾಗಿದೆ.

ಆತನ ದೇಹದಲ್ಲಿ ಹಲವು ಗಾಯಗಳು ಕಂಡು ಬಂದಿದೆ, ಘಟನೆಯ ಕುರಿತು ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಜೆ 5 ಗಂಟೆಯ ಸುಮಾರಿಗೆ ನಮ್ಮ ಮತಗಟ್ಟೆ ಅಧ್ಯಕ್ಷ ಬಿಜೋಯ್ ಬಾಬು ಅವರು ಕುಟುಂಬ ಸಮೇತ ಮನೆಗೆ ಮರಳುತ್ತಿದ್ದ ವೇಳೆ ಮೊನೊರಂಜನ್ ಹಜ್ರಾ ಮತ್ತು ಟಿಎಂಸಿ ಬೆಂಬಲಿತ ಗೂಂಡಾಗಳು ದಾಳಿ ನಡೆಸಿದ್ದರು ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

ಪ್ರವೀಣ್ ನೆಟ್ಟಾರು ಪತ್ನಿಗೆ ತೋರಿದ ಮಾನವೀಯತೆ ಫಾಝಿಲ್ & ಮಸೂದ್ ಕುಟುಂಬಕ್ಕೆ ತೋರಿಸುತ್ತಾರ ಸಿದ್ದರಾಮಯ್ಯ?ಬಿಜೆಪಿ ಅವಧಿಯಲ್ಲಿ ಹತ್ಯೆಯಾದ ಯುವಕರಿಬ್ಬರ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲಿ‌ ಕಾಂಗ್ರೆಸ್ಸಿಗರು ಮೌನ?

BIG NEWS ತೀವ್ರಗೊಂಡ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆ, ನೂತನ ಸಂಸತ್ ಭವನಕ್ಕೆ ಮೆರವಣಿಗೆ ತೆರಳಲು ಯತ್ನ; ಸಾಕ್ಷಿ ಮಲಿಕ್, ವಿನೇಶ್ ಪೋಗಟ್ ಸೇರಿ ಹಲವರು ವಶಕ್ಕೆ

ನವದೆಹಲಿ;ನೂತನ ಸಂಸತ್​ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿದ್ದಾರೆ.

Developed by eAppsi.com