ಪ್ರವಾದಿ ನಿಂದನೆ;ರಾತ್ರೋರಾತ್ರಿ ಠಾಣೆ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ ಜನ,ಕೊನೆಗೆ ಬಿಜೆಪಿ ಶಾಸಕ ಅರೆಸ್ಟ್
ಹೈದರಾಬಾದ್;ಪ್ರವಾದಿ ಮುಹಮ್ಮದರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಶಾಸಕ ರಾಜಾ ಸಿಂಗ್ ಅವರನ್ನು ಹೈದರಾಬಾದ್‌ನಲ್ಲಿ ಮಂಗಳವಾರ ಬಂಧಿಸಲಾಗಿದೆ.
ಬಿಜೆಪಿ ನಾಯಕನ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ನಿನ್ನೆ ರಾತ್ರಿ ದಕ್ಷಿಣ ವಲಯ ಡಿಸಿಪಿ ಕಚೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆದ ನಂತರ ಈ ಬೆಳವಣಿಗೆ ನಡೆದಿದೆ.
ಶಾಸಕರ ವಿರುದ್ಧ ಸಿಟ್ಟಿಗೆದ್ದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ದಬೀರ್‌ಪುರ,ಭವಾನಿನಗರ, ರೇನ್‌ಬಜಾರ್ ಮತ್ತು ಮಿರ್‌ಚೌಕ್ ಪೊಲೀಸ್ ಠಾಣೆಗಳಲ್ಲಿ ಪ್ರತಿಭಟನೆ ನಡೆಸುತ್ತಿರುವುದು ಕಂಡುಬಂದಿತ್ತು.
ಶಾಸಕರ ವಿರುದ್ಧ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಸಂಬಂಧ 295(ಎ),153(ಎ) ಮತ್ತು ಕಾನೂನಿನ ಇತರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಹೈದರಾಬಾದ್‌ನ ದಕ್ಷಿಣ ವಲಯದ ಪೊಲೀಸ್ ಉಪ ಆಯುಕ್ತ ಪಿ ಸಾಯಿ ಚೈತನ್ಯ ಹೇಳಿದರು.
ದಬೀರ್‌ಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪ್ರಕಾರ, ರಾಜಾ ಸಿಂಗ್ ಪ್ರವಾದಿಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ ಮತ್ತು ಸಮುದಾಯದ ಧಾರ್ಮಿಕ ಭಾವನೆಗಳನ್ನು ನಿಂದಿಸಿದ್ದಾರೆ ಮತ್ತು ಘಾಸಿಗೊಳಿಸಿದ್ದಾರೆ. ಈ ಬಗ್ಗೆ ದಬೀರ್‌ಪುರ ಪೊಲೀಸ್ ಠಾಣೆ ಎದುರು ನಿನ್ನೆ ರಾತ್ರಿ 250ಕ್ಕೂ ಹೆಚ್ಚು ಜನರು ಪ್ರತಿಭಟನೆ ನಡೆಸಿದ್ದರು ಎಂದು ಹೇಳಿದ್ದಾರೆ.