ಬರ ಅಧ್ಯಾಯನಕ್ಕೆ ತೆರಳಿ ಕೈಕೈ ಮಿಲಾಯಿಸಿಕೊಂಡ ಬಿಜೆಪಿ ನಾಯಕರು

ರಾಜ್ಯಾದ್ಯಂತ ಬಿಜೆಪಿ ನಾಯಕರು ಬರ ಅಧ್ಯಯನ ಪ್ರವಾಸ ಕೈಗೊಂಡಿದ್ದಾರೆ. ಬರ ಅಧ್ಯಯನಕ್ಕೆಂದು ಆಗಮಿಸಿದ್ದ ಬಿಜೆಪಿ ನಾಯಕರ ನಡುವೆಯೇ ಗಲಾಟೆ ನಡೆದು ಕೈಕೈ ಮಿಲಾಯಿಸಿಕೊಂಡಿರುವ ಘಟನೆ ರಾಮನಗರದಲ್ಲಿ ನಡೆದಿದೆ.

ರಾಮನಗರ ಜಿಲ್ಲೆಯ ವಿಭೂತಿಕೆರೆ ಗ್ರಾಮಕ್ಕೆ ಮಾಜಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ನೇತೃತ್ವದ ತಂಡ ಬರ ಅಧ್ಯಯನಕ್ಕೆ ಭೇಟಿ ನೀಡಿದೆ.ಬರ ಅಧ್ಯಯನಕ್ಕೆಂದು ಬಂದವರು ರೈತರ ಸಂಕಷ್ಟ ಆಲಿಸುವುದು ಬಿಟ್ಟು ಗಲಾಟೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಎಂಎಲ್ ಸಿ ಆ.ದೇವೇಗೌಡ, ಚನ್ನಪಟ್ಟಣ ತಾಲೂಕು ಘಟಕದ ಅಧ್ಯಕ್ಷ ಜಯರಾಂ ನಡುವೆ ವೈಯಕ್ತಿಕ ಕಾರಣಕ್ಕಾಗಿ ಮಾತಿಗೆ ಮಾತು ಆರಂಭವಾಗಿ ವಾಗ್ವಾದ ವಿಕೋಪಕ್ಕೆ ತಿರುಗಿದೆ. ಇಬ್ಬರು ನಾಯಕರು ಕೈಕೈ ಮಿಲಾಯಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮಾಜಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಎದುರೇ ಈ ಗಲಾಟೆ ನಡೆದಿದೆ. ಈ ವೇಳೆ ಮಧ್ಯಪ್ರವೇಶ ಮಾಡಿದ ಪೊಲೀಸರು ಹಾಗೂ ಸ್ಥಳೀಯ ಬಿಜೆಪಿ ಮುಖಂಡರು ಜಗಳ ಬಿಡಿಸಿದ್ದಾರೆ.

ಟಾಪ್ ನ್ಯೂಸ್