ರಾಜ್ಯ ಬಿಜೆಪಿಯ ಚುನಾವಣಾ ಪ್ರಣಾಳಿಕೆ ಬಿಡುಗಡೆಗೊಳಿಸಿದ ಜೆ.ಪಿ ನಡ್ಡಾ; ಪ್ರಣಾಳಿಕೆಯಲ್ಲಿ ಏನೇನಿದೆ? ಇಲ್ಲಿದೆ ಮಾಹಿತಿ

ಬೆಂಗಳೂರು;ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಬಿಜೆಪಿಯ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ.

ಪ್ರಜಾ ಪ್ರಣಾಳಿಕೆಯನ್ನು ಬಿಜೆಪಿಯ ರಾಜ್ಯ ನಾಯಕರ ಸಮ್ಮುಖದಲ್ಲಿ ಬಿಡುಗಡೆ ಮಾಡಲಾಗಿದೆ. ಪ್ರಣಾಳಿಕೆಯಲ್ಲಿ ಬಿಪಿಎಲ್‌ ಕುಟುಂಬಗಳಿಗೆ ಪ್ರತಿ ವರ್ಷ ಯುಗಾದಿ, ಚೌತಿ ಮತ್ತು ದೀಪಾವಳಿ ಹಬ್ಬಗಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್ ಗಳು ಉಚಿತವಾಗಿ ನೀಡುವ ಭರವಸೆ ನೀಡಲಾಗಿದೆ.

ಪ್ರತಿ ಮಹಾನಗರ ಪಾಲಿಕೆಯ ವಾರ್ಡ್‌ ಗಳಲ್ಲಿ ‘ಅಟಲ್ ಆಹಾರ ಕೇಂದ್ರ’ ಸ್ಥಾಪನೆ.’ಪೋಷಣೆ’ ಯೋಜನೆಯ ಮೂಲಕ ಪ್ರತಿ ಬಿಪಿಎಲ್ ಕುಟುಂಬಗಳಿಗೆ ಪ್ರತಿದಿನ ಅರ್ಧ ಲೀಟರ್ ನಂದಿನಿ ಹಾಲು ಮತ್ತು ಪ್ರತಿ ತಿಂಗಳು 5 ಕೆಜಿ ಶ್ರೀ ಅನ್ನ -ಸಿರಿಧಾನ್ಯವನ್ನು ಒಳಗೊಂಡ ಪಡಿತರ ಕಿಟ್ ನೀಡಲಾಗುವುದು

ಕರ್ನಾಟಕದಲ್ಲಿ ಏಕರೂಪ ನಾಗರಿಕ ಸಂಹಿತೆ‌ ಜಾರಿ.ರಾಜ್ಯಾದ್ಯಂತ ವಸತಿ ರಹಿತ ನಿವಾಸಿಗಳಿಗೆ ಸರ್ವರಿಗೂ ಸೂರು ಯೋಜನೆ’ಯಡಿ ಕಂದಾಯ ಇಲಾಖೆ ಮೂಲಕ 10 ಲಕ್ಷ ವಸತಿ ನಿವೇಶನಗಳ ಹಂಚಿಕೆ

‘ಒನಕೆ ಓಬವ್ವಸಾಮಾಜಿಕ ನ್ಯಾಯ ನಿಧಿ’ ಯೋಜನೆಯಡಿ ಎಸ್‌ಸಿ, ಎಸ್‌ಟಿ ಸಮುದಾಯದ ಮಹಿಳೆಯರು ಐದು ವರ್ಷಗಳ ಅವಧಿಗೆ ಮಾಡುವ ಸ್ಥಿರ ಠೇವಣಿಗಳ ಮೇಲೆ – 10 ಸಾವಿರದವರೆಗೆ ತಾಳಿಯಾಗುವ ಠೇವಣಿ.

ಕರ್ನಾಟಕ ಅಪಾರ್ಟ್ ಮೆಂಟ್ ಮಾಲಕತ್ವ ಕಾಯ್ದೆ 1972ಕ್ಕೆ ಸೂಕ್ತ ತಿದ್ದುಪಡಿ ತರಲಾಗುವುದು. ಕಂದುಕೊರತೆಗಳ ಪರಿಹಾರಕ್ಕೆ ಆನ್ ಲೈನ್ ವ್ಯವಸ್ಥೆ ಅನುಷ್ಠಾನ.

ಐಎಎಸ್,ಬ್ಯಾಂಕಿಂಗ್, ಸರ್ಕಾರಿ ಉದ್ಯೋಗಾಕಾಂಕ್ಷಿಗಳು ತರಬೇತಿ ಪಡೆಯಲು ಆರ್ಥಿಕ ಪ್ರೋತ್ಸಾಹ.

‘ಮಿಷನ್ ಸ್ವಾಸ್ಥ್ಯ ಕರ್ನಾಟಕ’ ಯೋಜನೆಡಿ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿನ ಮೂಲ ಸೌಕರ್ಯಗಳನ್ನು ಸುಧಾರಣೆಗೆ ಕ್ರಮ.

ಮಹಾನಗರ ಪಾಲಿಕೆಯ ಪ್ರತಿ ವಾರ್ಡ್ ನಲ್ಲಿ ಲ್ಯಾಬೊರೇಟರಿ ಸೌಲಭ್ಯ ಹೊಂದಿರುವ ನಮ್ಮ ಕ್ಲಿನಿಕ್ ಸ್ಥಾಪನೆ. ಹಾಗೂ ಹಿರಿಯ ನಾಗರಿಕರಿಗೆ ಪ್ರತಿ ವರ್ಷ ಉಚಿತವಾಗಿ ಸಂಪೂರ್ಣ ಆರೋಗ್ಯ ತಪಾಸಣೆಯ ಸೌಲಭ್ಯ.

ಕರ್ನಾಟಕವನ್ನು ಎಲೆಕ್ಟ್ರಿಕ್ ವಾಹನಗಳ ಪ್ರಮುಖ ಕೇಂದ್ರವನ್ನಾಗಿ ರೂಪಿಸಲು ಕ್ರಮ. ಒಂದು ಸಾವಿರ ಕೋಟಿ ಮೊತ್ತದ ಬೆಲೆ ಸ್ಥಿರೀಕರಣ ನಿಧಿ ಸ್ಥಾಪನೆ.ನೇಕಾರ ಸಮ್ಮಾನ ಯೋಜನೆಯಡಿ 1.5 ಲಕ್ಷ ನೇಕಾರರಿಗೆ ನೆರವು
ನೇಕಾರರಿಗೆ ನೀಡುವ ಧನಸಹಾಯ 2 ಸಾವಿರದಿಂದ 5 ಸಾವಿರಕ್ಕೆ ಹೆಚ್ಚಳ

ಉದ್ಯೋಗಸ್ಥ ಮಹಿಳೆಯರು, ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್​,ಮೈಸೂರಿನಲ್ಲಿ ಅತಿದೊಡ್ಡ ಪುನೀತ್ ರಾಜ್​ಕುಮಾರ್​ ಫಿಲ್ಮ್​ಸಿಟಿ ಸ್ಥಾಪನೆ,ವಿಧವೆಯರ ಮಾಸಿಕ ಪಿಂಚಣಿ 800 ರೂ.ರಿಂದ 2 ಸಾವಿರಕ್ಕೆ ಹೆಚ್ಚಳ
ಎಲ್ಲಾ ತಾಲೂಕು ಕೇಂದ್ರಗಳಲ್ಲಿ ‘ಸ್ವದೇಶಿ ಕ್ರೀಡೆ’ ಕಬಡ್ಡಿ ತರಬೇತಿ ಕೇಂದ್ರ ಸ್ಥಾಪನೆ.

ಟಾಪ್ ನ್ಯೂಸ್

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com