ಬಿಜೆಪಿ ಸಂಸದರ ಮನೆಯಲ್ಲಿ ಬಾಲಕನ ಮೃತದೇಹ ಪತ್ತೆ

ಬಿಜೆಪಿ ಸಂಸದರ ಮನೆಯಲ್ಲಿ ಬಾಲಕ ನೇಣು ಹಾಕಿಕೊಂಡು ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ

ಶನಿವಾರ ಸಂಜೆ ಅಸ್ಸಾಂನ ಸಿಲ್ಚಾರ್‌ನಲ್ಲಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ರಾಜದೀಪ್ ರಾಯ್ ಅವರ ನಿವಾಸದಲ್ಲಿ 10 ವರ್ಷದ ಬಾಲಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶವವನ್ನು ಪೊಲೀಸರು ವಶಪಡಿಸಿಕೊಂಡರು ಮತ್ತು ಮರಣೋತ್ತರ ಪರೀಕ್ಷೆಗಾಗಿ ಸಿಲ್ಚಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ (SMCH) ಕಳುಹಿಸಿದ್ದಾರೆ.

ಬಾಲಕ 5 ನೇ ತರಗತಿ ವಿದ್ಯಾರ್ಥಿಯಾಗಿದ್ದು, ಕೆಲವು ವರ್ಷಗಳಿಂದ ತನ್ನ ತಾಯಿ ಮತ್ತು ಅಕ್ಕನೊಂದಿಗೆ ಸಂಸದರ ಮನೆಯಲ್ಲಿ ವಾಸಿಸುತ್ತಿದ್ದ ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.

ಅವರು ಕ್ಯಾಚಾರ್ ಜಿಲ್ಲೆಯ ಪಲೋಂಗ್ ಘಾಟ್ ಪ್ರದೇಶದಿಂದ ಬಂದವರು ಮತ್ತು ಅವರ ತಾಯಿ ಸಂಸದ ರಾಜದೀಪ್ ರಾಯ್ ಅವರ ಮನೆಯಲ್ಲಿ ಮನೆ ಸಹಾಯಕರಾಗಿ ಕೆಲಸ ಮಾಡುತ್ತಾರೆ. ತನ್ನ ಇಬ್ಬರು ಮಕ್ಕಳ ಉತ್ತಮ ಶಿಕ್ಷಣಕ್ಕಾಗಿ, ಮಹಿಳೆ ಅವರನ್ನು ಕೆಲವು ವರ್ಷಗಳ ಹಿಂದೆ ಸಿಲ್ಚಾರ್‌ಗೆ ಕರೆತಂದಿದ್ದರು ಎಂದು ಕುಟುಂಬದ ಸದಸ್ಯರು ಶನಿವಾರ ಸಂಜೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಇದು ಆತ್ಮಹತ್ಯೆ ಎಂದು ಕಂಡುಬರುತ್ತಿದೆ, ವಿಡಿಯೋ ಗೇಮ್ ಆಡಲು ಮೊಬೈಲ್ ಕೇಳಿದಾಗ ತಾಯಿ ಕೊಡದಿದ್ದಕ್ಕೆ ಕೋಪಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದು ತಿಳಿದು ಬಂದಿದೆ.

ಬಾಲಕನ ತಾಯಿ ಆತನ ಸಹೋದರಿಯೊಂದಿಗೆ ದಿನಸಿ ಖರೀದಿಸಲು ಹೋಗಿದ್ದರು.ಆ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದು ತಿಳಿದು ಬಂದಿದೆ.

ಸಂಸದರು ಮಾತನಾಡಿ, ಬಾಲಕ ಓದಿನಲ್ಲಿ ತುಂಬಾ ಚುರುಕು, ಆತನ ಕೈಬರಹವನ್ನು ಕೂಡ ನೋಡಿದ್ದೇನೆ, ಈ ಸಾವು ನನಗೂ ನೋವು ತಂದಿದೆ, ವೈಯಕ್ತಿಕವಾಗಿ ನನಗೂ ನಷ್ಟವಾಗಿದೆ, ನಮ್ಮ ಕುಟುಂಬವು ಆತಂಕ್ಕೊಳಗಾಗಿದೆ ಎಂದಿದ್ದಾರೆ.

ಟಾಪ್ ನ್ಯೂಸ್