ಮೂಡಿಗೆರೆ;ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ನೀಡಿದೆ.
8 ಚೆಕ್‌ಬೌನ್ಸ್ ಪ್ರಕರಣದಲ್ಲಿ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಇಲ್ಲವಾದಲ್ಲಿ ಪ್ರಕರಣಕ್ಕೆ ಸಂಬಂಧಿಸಿ 1.38 ಕೋಟಿ ರು.ಹಣ ಪಾವತಿಸಬೇಕು ಎಂದು ನ್ಯಾಯಾಲಯವು ತಿಳಿಸಿದೆ.
ಹೂವಪ್ಪಗೌಡ ಎಂಬವರಿಂದ 1.35 ಕೋಟಿ ರು.ಗಳನ್ನು ಎಂ.ಪಿ.ಕುಮಾರಸ್ವಾಮಿ ಸಾಲ ಪಡೆದಿದ್ದರು.ಸಾಲ ಮರುಪಾವತಿಗೆ 8 ಚೆಕ್‌ಗಳನ್ನು ನೀಡಿದ್ದರು.ಎಲ್ಲ ಚೆಕ್‌ಗಳು ಬೌನ್ಸ್ ಆಗಿದ್ದವು.