ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು:ಬಿಜೆಪಿ ಶಾಸಕ, ಮಾಜಿ ಸಚಿವ ಮುನಿರತ್ನ ವಿರುದ್ಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಅನುಮತಿ ಪಡೆಯದೆ ಅಕ್ರಮವಾಗಿ ಜಿಲೆಟಿನ್ ಸ್ಫೋಟಿಸಿದ ಆರೋಪ ಹಿನ್ನೆಲೆಯಲ್ಲಿ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ದೂರು ದಾಖಲಿಸಲಾಗಿದೆ.

ಯಲಹಂಕ ತಹಶೀಲ್ದಾರ್ ಅನಿಲ್ ಆರೋಳಕರ್ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದೆ.

ಸರ್ಕಾರಿ ಜಮೀನು ಸೇರಿದಂತೆ ಖಾಸಗಿ ಜಮೀನಿನಲ್ಲಿ ಕಲ್ಲು ಗಣಿಗಾರಿಕೆ ಮಾಡಲಾಗಿದೆ ಮತ್ತು ಹುಣಸಮಾರನಹಳ್ಳಿ ಜಮೀನಿನಲ್ಲಿ ಗಣಿಗಾರಿಕೆ ವೇಳೆ ಜಿಲೆಟಿನ್ ಸ್ಪೋಟಿಸಲಾಗಿದೆ ಎಂದು ಆರೋಪಿಸಲಾಗಿದೆ.

ಗಣಿಗಾರಿಕೆ ವಿರುದ್ಧ ಹುಣಸಮಾರನಹಳ್ಳಿ ಗ್ರಾಮಸ್ಥರು ಧರಣಿ ನಡೆಸಿದ್ದರು, ಗ್ರಾಮಸ್ಥರ ಧರಣಿ ಹಿನ್ನೆಲೆ ತಹಶೀಲ್ದಾರ್ ಸ್ಥಳ ಪರಿಶೀಲನೆ ನಡೆಸಿ ದೂರು ನೀಡಿದ್ದು, ಎಫ್‌ಐಆರ್ ದಾಖಲಿಸಲಾಗಿದೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ