ರಾಜ್ಯದ ಇಬ್ಬರು ಬಿಜೆಪಿ ಶಾಸಕರು ಜೈಲು ಶಿಕ್ಷೆಗೆ ಗುರಿಯಾದರೂ ಅವರನ್ನು ಈವರೆಗೆ ಅನರ್ಹ ಮಾಡಲಾಗಿಲ್ಲ!; ಯಾರು ಆ ಶಾಸಕರು ಗೊತ್ತಾ?

ಬೆಂಗಳೂರು;ಮಾನನಷ್ಟ ಪ್ರಕರಣದಲ್ಲಿ ರಾಹುಲ್‌ ಗಾಂಧಿ ಅವರಿಗೆ ಜೈಲು ಶಿಕ್ಷೆ ಘೋಷಿಸಿದ ಮರುದಿನವೇ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ.ಈ ಬಗ್ಗೆ ಕಾಂಗ್ರೆಸ್ ದ್ವೇಷದ ರಾಜಕೀಯ ಎಂದು ಹೇಳಿದ್ದು, ಕ್ರಮವನ್ನು ಖಂಡಿಸಿದೆ.

ರಾಹುಲ್ ಗಾಂಧಿಯ ಅನರ್ಹತೆ ಆದೇಶವನ್ನು ವಿಪಕ್ಷಗಳು ಖಂಡಿಸಿದೆ.ಈ ಕುರಿತಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಕರ್ನಾಟಕದಲ್ಲಿ ವಂಚಕ ಬಿಜೆಪಿಯ ಇಬ್ಬರು ಶಾಸಕರಿಗೆ ಜೈಲು ಶಿಕ್ಷೆಯಾಗಿತ್ತು, ಆದರೂ ಸ್ಪೀಕರ್ ಅವರನ್ನು ಅನರ್ಹಗೊಳಿಸಿರಲಿಲ್ಲ.ಬಿಜೆಪಿಯವರು ನಿಯಮ, ಕಾನೂನುಗಳಿಗೆ ಅತೀತರೇ? ಇಷ್ಟು ದಿನಗಳವೆರೆಗೆ ಇವರನ್ನು ಅನರ್ಹಗೊಳಿಸದಿದ್ದಿದ್ದು ಏಕೆ? ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಹೊರಟಿರುವ ಬಿಜೆಪಿಯ ಅಂತ್ಯಕಾಲ ಆರಂಭಗೊಳ್ಳುತ್ತಿದೆ ಎಂದು ಕಿಡಿಕಾರಿದೆ.

ಕರ್ನಾಟಕದ ಇಬ್ಬರು ಶಾಸಕರಿಗೆ ಜೈಲು ಶಿಕ್ಷೆ ವಿಧಿಸಲಾಗಿತ್ತು. ಆದರೆ ಅವರನ್ನು ಸ್ಪೀಕರ್ ಅನರ್ಹ ಮಾಡಿಲ್ಲ ಎಂದು ಕಾಂಗ್ರೆಸ್ ಆಕ್ರೋಶ ಹೊರ ಹಾಕಿದೆ.

ಚೆಕ್ ಬೌನ್ಸ್ ಪ್ರಕರಣದಲ್ಲಿ ಮೂಡಿಗೆರೆ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿಗೆ ಫೆಬ್ರವರಿ 14ರಂದು ಜನಪ್ರತಿನಿಧಿಗಳ ನ್ಯಾಯಾಲಯವು 4 ವರ್ಷ ಜೈಲು ಶಿಕ್ಷೆ ವಿಧಿಸಿತ್ತು.

ಇನ್ನು ಬಿಜೆಪಿ ಶಾಸಕ ನೆಹರೂ ಓಲೇಕಾರ್ ಅವರಿಗೆ ನಗರಸಭೆ ಕಾಮಗಾರಿಯಲ್ಲಿ ನಕಲಿ ಬಿಲ್ ಸೃಷ್ಟಿಸಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ 2 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ನ್ಯಾಯಾಲಯವು ತೀರ್ಪು ನೀಡಿತ್ತು.ಆದರೆ ಅವರನ್ನು ಸ್ಪೀಕರ್ ಅನರ್ಹ ಮಾಡಿಲ್ಲ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ