ನೀನು ಹಣೆಗೆ ಕುಂಕುಮ ಯಾಕಿಟ್ಟಿಲ್ಲ? ಗಂಡ ಬದುಕಿದ್ದಾನೆ ತಾನೇ? ಮಹಿಳೆಗೆ ಗದರಿಸಿದ ಬಿಜೆಪಿ ಸಂಸದ!; ವಿಡಿಯೋ ವೈರಲ್…

ಕೋಲಾರ;ವ್ಯಾಪಾರಿ ಮಹಿಳೆಗೆ ಹಣೆಗೆ ಯಾಕೆ ಕುಂಕುಮ ಇಟ್ಟಿಲ್ಲ ಎಂದು ಸಾರ್ವಜನಿಕವಾಗಿ ಬಿಜೆಪಿ ಸಂಸದ ಎಸ್. ಮುನಿಸ್ವಾಮಿ ಅವಮಾನಿಸಿದ್ದಾರೆಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮ ಒಂದರಲ್ಲಿ ಮುಳಬಾಗಿಲು ಮೂಲದ ಮಹಿಳೆಯೊಬ್ಬರು ಮಳಿಗೆ ಹಾಕಿದ್ದರು.

ಶಾಸಕ ಶ್ರೀನಿವಾಸ ಗೌಡ ಹಾಗೂ ಇತರ ಜನ ಪ್ರತಿನಿಧಿಗಳ ಜೊತೆ ಭೇಟಿ ಕೊಟ್ಟಿದ್ದ ಸಂಸದ ಮುನಿಸ್ವಾಮಿ ಏನಮ್ಮ ನಿನ್ನ ಹೆಸರು, ಹಣೆಗೆ ಯಾಕೆ ಕುಂಕುಮ ಹಾಕಿಲ್ಲ? ಗಂಡ ಬದುಕಿದ್ದಾನೆ ತಾನೇ? ವೈಷ್ಣವಿ ಎಂದು ಅಂಗಡಿ ಹೆಸರನ್ನು ಯಾಕೆ ಇಟ್ಟುಕೊಂಡಿದ್ದೀಯಾ? ಎಂದು ಅವಮಾನಿಸಿದ್ದಾರೆ.

ಈ ಕುರಿತ ವಿಡಿಯೋ ಹಂಚಿಕೊಂಡ ಕಾಂಗ್ರೆಸ್ ಸಂಸದ ಮತ್ತು ಬಿಜೆಪಿ ವಿರುದ್ಧ ಕಿಡಿಕಾರಿದೆ.ಹಣೆಗೆ ಕುಂಕುಮ ಯಾಕಿಟ್ಟಿಲ್ಲ, ಗಂಡ ಬದುಕಿದಾನೆ ತಾನೇ” ಎಂದುಬಿಜೆಪಿ ಸಂಸದ ಮುನಿಸ್ವಾಮಿ ಮಹಿಳೆಗೆ ಅವಮಾನಿಸಿದ್ದು ಬಿಜೆಪಿಯ ಮಹಿಳಾ ವಿರೋಧಿ ನೀತಿಗೆ ಸಾಕ್ಷಿ.ಮಹಿಳೆಯರ ಸ್ವತಂತ್ರ ಕಸಿಯಲು, ಅವರ ಉಡುಗೆ ತೊಡುಗೆ ನಿರ್ಧರಿಸಲು ಬಿಜೆಪಿಗೆ ಯಾವ ಹಕ್ಕಿದೆ?ಮಹಿಳಾ ದಿನದಂದೇ ಮಹಿಳೆಗೆ ಅವಮಾನಿಸಿ ವಿಕೃತಿ ಮೆರೆದಿದೆ @BJP4Karnataka ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com