ಬಿಜೆಪಿಯಿಂದ 13 ರಾಷ್ಟ್ರೀಯ ಉಪಾಧ್ಯಕ್ಷರ ನೇಮಕ, ಪಟ್ಟಿಯಲ್ಲಿ ಮುಸ್ಲಿಮರಿಗೂ ಸ್ಥಾನ; ಲೋಕಸಭೆ ಚುನಾವಣೆಗೆ ಮೊದಲೇ ಬಿಜೆಪಿಯಿಂದ ಹೊಸ ಪದಾಧಿಕಾರಿಗಳ ನೇಮಕ

ನವದೆಹಲಿ;ಲೋಕಸಭೆ ಚುನಾವಣೆಗೆ ಸಿದ್ದತೆ ನಡೆಸುತ್ತಿರುವ ಬಿಜೆಪಿ ಕೇಂದ್ರೀಯ ಪದಾಧಿಕಾರಿಗಳ ಪಟ್ಟಿಯನ್ನು ಬಿಡಗಡೆ ಮಾಡಿದೆ.
ಬಿಜೆಪಿಯು 13 ರಾಷ್ಟ್ರೀಯ ಉಪಾಧ್ಯಕ್ಷರು ಹಾಗೂ 9 ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಿದ್ದು, ಕರ್ನಾಟಕದ ಬಿ.ಎಲ್.‌ ಸಂತೋಷ್‌ ಅವರು ಮಾತ್ರ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಮುಂದುವರಿದಿದ್ದಾರೆ.

ವಿಧಾನಪರಿಷತ್‌ ಮಾಜಿ ಸದಸ್ಯ, ಅಲಿಗಢ ಮುಸ್ಲಿಂ ವಿವಿ ಮಾಜಿ ಕುಲಪತಿ ತಾರಿಕ್‌ ಮನ್ಸೂರ್‌ ಅವರನ್ನು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಇವರು ಪಸ್ಮಂದಾ ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿದ್ದು, ಈ ಸಮುದಾಯ ಸೇರಿ ಇಡೀ ಮುಸ್ಲಿಂ ಸಮುದಾಯದವರನ್ನು ಸೆಳೆಯಲು ಬಿಜೆಪಿ ಯತ್ನಿಸಿದೆ.

ತೆಲಂಗಾಣ ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್‌ ಹಾಗೂ ರಾಜ್ಯಸಭೆ ಸದಸ್ಯ ರಾಧಾಮೋಹನ್‌ ಅಗರ್ವಾಲ್‌ ಅವರು ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾಗಿ ಆಯ್ಕೆಯಾಗಿದ್ದಾರೆ.

ಇನ್ನು ಕೆಲ ತಿಂಗಳ ಹಿಂದಷ್ಟೇ ಬಿಜೆಪಿ ಸೇರಿದ ಅನಿಲ್‌ ಆಯಂಟನಿ ಅವರನ್ನೂ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ. ಅನಿಲ್‌ ಆಯಂಟನಿ ಅವರು ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್‌ ಹಿರಿಯ ನಾಯಕ ಎ.ಕೆ.ಆಯಂಟನಿ ಅವರ ಪುತ್ರರಾಗಿದ್ದಾರೆ.
ಟಾಪ್ ನ್ಯೂಸ್