ಬಿಜೆಪಿ ಕಚೇರಿಯ ವಿಐಪಿ ಕೊಠಡಿಯಲ್ಲಿ “ಬೆತ್ತಲೆ” ಮೃತದೇಹ ಪತ್ತೆ

ಮತ್ತೊಂದು ಆಘಾತಕಾರಿ ಘಟನೆಯಲ್ಲಿ, ಗುರುವಾರ ಬೆಳಗ್ಗೆ ಅಸ್ಸಾಂನ ಕ್ಯಾಚಾರ್ ಜಿಲ್ಲೆಯ ಭಾರತೀಯ ಜನತಾ ಪಕ್ಷದ ( ಬಿಜೆಪಿ) ಕಚೇರಿಯ ವಿಐಪಿ ಕೊಠಡಿಯಲ್ಲಿ ಅಪರಿಚಿತ ವ್ಯಕ್ತಿಯ ಬೆತ್ತಲೆ ಶವ ಪತ್ತೆಯಾಗಿದೆ.

ಇಂದು ಬೆಳಗ್ಗೆ ಪಕ್ಷದ ಕಾರ್ಯಕರ್ತರಿಗೆ ನಿಗೂಢ ರೀತಿಯಲ್ಲಿ ವಿಐಪಿ ಕೊಠಡಿಯಲ್ಲಿ ಶವ ಪತ್ತೆಯಾಗಿದ್ದು, ಪಕ್ಷದ ಜಿಲ್ಲಾಧ್ಯಕ್ಷ ಬಿಮಲೇಂದು ರಾಯ್ ಅವರಿಗೆ ಕರೆ ಮಾಡಿ ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪೊಲೀಸರು ಸ್ಥಳಕ್ಕೆ ಆಗಮಿಸಿ ಶವವನ್ನು ಸಿಲ್ಚಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕಳುಹಿಸಿದ್ದಾರೆ ಮತ್ತು ಪ್ರಸ್ತುತ ಮೃತದೇಹ ಶವಾಗಾರದಲ್ಲಿ ಇರಿಸಲಾಗಿದೆ.ಮೃತದೇಹದ ಗುರುತು ಸಿಕ್ಕಿಲ್ಲ ಎನ್ನಲಾಗಿದೆ.

ಈ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಈ ಮಧ್ಯೆ, ಪಕ್ಷದ ಜಿಲ್ಲಾಧ್ಯಕ್ಷರು ಮತ್ತು ಕಾರ್ಯಕರ್ತರು ಮಾಧ್ಯಮಗಳಿಗೆ ಯಾವುದೇ ಹೇಳಿಕೆ ಕೊಟ್ಟಿಲ್ಲ ಎಂದು ಮೂಲಗಳು ತಿಳಿಸಿವೆ.

ಇತ್ತೀಚೆಗೆ ಬಿಜೆಪಿ ಕಿಸಾನ್ ಮೋರ್ಚಾದ ಕಾರ್ಯದರ್ಶಿ ಇಂದ್ರಾಣಿ ತಹಬೀಲ್ದಾರ್ ಆತ್ಮಹತ್ಯೆ ಪ್ರಕರಣ ಇಡೀ ಪಕ್ಷವನ್ನೇ ಬೆಚ್ಚಿಬೀಳಿಸಿದೆ.

ಟಾಪ್ ನ್ಯೂಸ್