ಬಿಜೆಪಿ ಪೋಲಿಂಗ್ ಬೂತ್ ಏಜೆಂಟ್ ಆಗಿದ್ದ ವ್ಯಕ್ತಿ ಇಂದು ಶವವಾಗಿ ಪತ್ತೆ, ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕುಟುಂಬ
ಕಲಬುರಗಿ:ಬಿಜೆಪಿ ಕಾರ್ಯಕರ್ತನೋರ್ವ ಶವವಾಗಿ ಪತ್ತೆಯಾಗಿರುವ ಘಟನೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಸಲಗರ ಬಸಂತಪುರದಲ್ಲಿ ನಡೆದಿದೆ.
ರಾಮು ರಾಠೋಡ್ (45) ಎಂಬಾತ ಮೃತರು. ಈತ ಬಿಜೆಪಿ ಕಾರ್ಯಕರ್ತನಾಗಿದ್ದು,ಸಲಗರ ಬಸಂತಪುರ ತಾಂಡಾ ನಿವಾಸಿಯಾಗಿದ್ದರು.
ಬುಧವಾರ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸಂಜೆವರೆಗೂ ಪೋಲಿಂಗ್ ಬೂತ್ ಏಜೆಂಟ್ ಆಗಿ ಕಾರ್ಯನಿರ್ವಹಿಸಿದ್ದರು ಎನ್ನಲಾಗಿದೆ. ಮುಂಜಾನೆ ತಾಂಡಾದ ಹೊರವಲಯದಲ್ಲಿ ಮರದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ರಾಮು ಕುಟುಂಬ ಘಟನೆ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.