ರಾಜ್ಯ ಬಿಜೆಪಿಗೆ ಯಾರಾಗಲಿದ್ದಾರೆ ನೂತನ ಸಾರಥಿ? ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ರೇಸ್ ನಲ್ಲಿ ಯಾರೆಲ್ಲಾ ಇದ್ದಾರೆ ಗೊತ್ತಾ?

ಬೆಂಗಳೂರು; ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಸೋಲಿಗೆ ಕಾರಣಗಳ ಕುರಿತು ಚರ್ಚಿಸಲು ಬಿಜೆಪಿ ನಾಯಕರು ಇಂದು ಆತ್ಮಾವಲೋಕನ ಸಭೆ ನಡೆಸಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರ ನೇತೃತ್ವದ ಸಭೆಯಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ, ಸದಾನಂದ ಗೌಡ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೆಎಸ್ ಈಶ್ವರಪ್ಪ ಸೇರಿದಂತೆ ಹಲವು ಹಿರಿಯ ನಾಯಕರು ಹಾಜರಿದ್ದರು.

ಇದೇ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನ ನೇಮಕದ ಕುರಿತು ಶಾಸಕರ ಅಭಿಪ್ರಾಯಗಳನ್ನು ಸಂಗ್ರಹಿಸಿದರು.ಬಳಿಕ
ಪರಾಜಿತ ಅಭ್ಯರ್ಥಿಗಳೊಂದಿಗೆ ಪ್ರತ್ಯೇಕ ಸಭೆ ನಡೆಸಿದರು.

ವಿಪಕ್ಷ ಸ್ಥಾನದ ರೇಸ್ ನಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ್ ಬೆಲ್ಲದ್ ಇದ್ದಾರೆ ಎನ್ನಲಾಗಿದೆ.

ಇನ್ನು ಬಿಜೆಪಿ ರಾಜ್ಯಾದ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಅವಧಿ ಮುಗಿದ್ದು, ನೂತನ ರಾಜ್ಯಾಧ್ಯಕ್ಷರ ನೇಮಕಕ್ಕೆ ಬಿಜೆಪಿ ಮುಂದಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ರೇಸ್ ನಲ್ಲಿ ಮಾಜಿ ಸಚಿವರಾದ ಸಿಟಿ ರವಿ,ಡಾ. ಅಶ್ವಥ್ ನಾರಾಯಣ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಸಚಿವ ಸುನಿಲ್ ಕುಮಾರ್ ಇದ್ದಾರೆ ಎನ್ನಲಾಗಿದೆ.

ಇಂದು ವಿಪಕ್ಷ ನಾಯಕನ ಆಯ್ಕೆ ಅಂತಿಮವಾಗಬೇಕಿತ್ತು. ಆದರೆ ಕಾರಣಾಂತರಗಳಿಂದ ಕೋರ್ ಕಮಿಟಿ ಸಭೆ ಮುಂದೂಡಲಾಗಿದೆ.ವಿಪಕ್ಷ ನಾಯಕರ ಆಯ್ಕೆ ಬಳಿಕ ಬಿಜೆಪಿಗೆ ರಾಜ್ಯಾಧ್ಯಕ್ಷರ ನೇಮಕ ನಡೆಯಲಿದೆ ಎನ್ನಲಾಗಿದೆ.

ಟಾಪ್ ನ್ಯೂಸ್