ವಿಪಕ್ಷ ನಾಯಕನಿಲ್ಲದೆ ಬಜೆಟ್ ಮಂಡನೆಯಾಗಿರುವುದು ನಾಚಿಕೆಯ ಸಂಗತಿ ಸ್ವಪಕ್ಷದ ವಿರುದ್ಧವೇ ಟೀಕಿಸಿದ ಬಿಜೆಪಿ ಶಾಸಕ

ಮೈಸೂರು: ಒಬ್ಬ ವಿಪಕ್ಷ ನಾಯಕನಿಲ್ಲದೆ ಬಜೆಟ್ ಮಂಡನೆಯಾಗಿರುವುದು ನಾಚಿಕೆಯ ಸಂಗತಿ ಎಂದು ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಅವರು ಬಿಜೆಪಿ ವಿರುದ್ಧವೇ ಟೀಕಿಸಿದ್ದಾರೆ.

ಇಂದು ಮೈಸೂರು ಪತ್ರಕರ್ತರ ಭವನದಲ್ಲಿ ಇಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ವಿಶ್ವನಾಥ್, ಒಬ್ಬ ವಿರೋಧ ಪಕ್ಷದ ನಾಯಕನಿಲ್ಲದೆ ಬಜೆಟ್ ಮಂಡನೆಯಾಗಿದೆ ಎಂದರೆ ಇದು ನಾಚಿಕೆಯ ಸಂಗತಿ. ಇದು ಬಿಜೆಪಿಯಲ್ಲಿ ಅರಾಜಕತೆ ಇದೆ ಎಂಬುದನ್ನು ತೋರಿಸುತ್ತದೆ. ಕಾಂಗ್ರೆಸ್ ಗ್ಯಾರಂಟಿಗಳನ್ನು ಟೀಕೆ ಮಾಡುವ ಬಿಜೆಪಿಗೆ ಈ ರೀತಿ ಆಗಿರುವುದು ನಾಚಿಕೆಗೇಡು ಎಂದು ಹೇಳಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು 2023-24 ನೇ ಸಾಲಿನ ಬಜೆಟ್ ಉತ್ತಮವಾಗಿದ್ದು. ಅಕ್ಷರ, ಅನ್ನ, ಆರೋಗ್ಯಕ್ಕೆ ಒತ್ತು ನೀಡಿದ್ದು, ಮೂರು ಕ್ಷೇತ್ರಕ್ಕೂ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಎಲ್ಲಾ ವರ್ಗದ ಜನತೆಗೆ ಉತ್ತಮ ಬಜೆಟ್ ನೀಡಿದ್ದಾರೆ. ಶಿಕ್ಷಣಕ್ಕೆ, ಸಮಾಜ ಕಲ್ಯಾಣಕ್ಕೆ, ಕನ್ನಡ ಪುಸ್ತಕ ಖರೀದಿಗೆ ಹೆಚ್ಚಿನ ಹಣ ನೀಡಿದ್ದರು. ಪ್ರಮುಖವಾಗಿ ಐದು ಗ್ಯಾರಂಟಿಗಳನ್ನು ದೇಶದಲ್ಲಿ ಎಲ್ಲೂ ನೀಡಿರಲಿಲ್ಲ. ಯಾವ ಜಾತಿ, ಧರ್ಮ ನೋಡದೇ ಎಲ್ಲರಿಗೂ ಗ್ಯಾರಂಟಿ ಯೋಜನೆ ನೀಡಿರುವುದು ದೇಶದಲ್ಲೇ ಮಾದರಿ ಎಂದು ಸಿದ್ದರಾಮಯ್ಯ ಬಜೆಟ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ‌

ಕುಮಾರಸ್ವಾಮಿ ಒಬ್ಬ ಹಿರಿಯ ನಾಯಕ, ಎರಡು ಬಾರಿ ಮುಖ್ಯಮಂತ್ರಿ ಆಗಿದ್ದವರು ಹಾಗೂ ಮಾಜಿ ಪ್ರಧಾನಿಗಳ ಮಗ, ಅವರು ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ. ಪೆನ್ ಡ್ರೈವ್​ಅನ್ನು ತೋರಿಸಿ ಜೇಬಿನಲ್ಲಿ ಇಟ್ಟುಕೊಳ್ಳುವುದು, ಇದು ಒಂತರ ಬ್ಲಾಕ್ ಮೇಲ್. ಇದ್ದರೆ ತೋರಿಸಲಿ, ಅದನ್ನು ಬಿಟ್ಟು ಮಿಮಿಕ್ರಿ ತರ ಕುಮಾರಸ್ವಾಮಿ ಮಾಡಬಾರದು ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್