ಸಿಟಿ ರವಿ ಸೋಲಿಗೆ ಅವರ ನಾಲಗೆ, ದುರಹಂಕಾರ ಕಾರಣ- ಸಿಟಿ ರವಿ ಸೋಲಿನ ಬಗ್ಗೆ ಭೋಜೇಗೌಡ & ಎಂಪಿ ಕುಮಾರಸ್ವಾಮಿ ಏನೆಲ್ಲಾ ಹೇಳಿದ್ರು?

ಚಿಕ್ಕಮಗಳೂರು;ಸಿಟಿ.ರವಿ ಸೋಲಿಗೆ ಅವರ ನಾಲಿಗೆ, ದುರಾಡಳಿತ, ದುರಹಂಕಾರ ಕಾರಣ ಎಂದು ಜೆಡಿಎಸ್‌ನ ಎಸ್.ಎಲ್.ಭೋಜೇಗೌಡ ಚಿಕ್ಕಮಗಳೂರಿನಲ್ಲಿ ಹೇಳಿದ್ದಾರೆ.

ಕುಲದ ಕುತ್ತಿಗೆ ಉದ್ದ ಸರ್, ಅಷ್ಟು ಸುಲಭ ಇಲ್ಲ. ‘ಬ್ಲಡ್ ಇಸ್ ಥಿಕ್ಕರ್ ದೆನ್ ವಾಟರ್’, ಕುಲದ ಬಗ್ಗೆ ಮಾತನಾಡುವಾಗ ಜನ ಆತನ ಹಮ್ಮಿನ ಬಗ್ಗೆ ಯೋಚಿಸ್ತಾರೆ. ಸಿ.ಟಿ.ರವಿ ಸೋಲಿಗೆ ಅವರ ನಾಲಿಗೆಯೇ ಕಾರಣ ಎಂದು ಹೇಳಿದ್ದಾರೆ.

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಸಿ.ಟಿ.ರವಿ, ಎಚ್‌.ಡಿ.ತಮ್ಮಯ್ಯ ವಿರುದ್ಧ ಸೋತ ಬೆನ್ನಲೇ ಭೋಜೇಗೌಡ ಸಿ.ಟಿ.ರವಿಯನ್ನು ಸೋಲಿಸಿದ ಬಗ್ಗೆ ಬಳಿಕ ನೀಡಿದ್ದಾರೆ.

ಟೀಕೆಗಳು ತಪ್ಪಲ್ಲ, ಆದರೆ, ಅದಕ್ಕೊಂದು ಇತಿಮಿತಿ ಇರುತ್ತಿತ್ತು. ರಾಜಕೀಯ ಅಸ್ತ್ರದ ಟೀಕೆ ಸರಿ, ವೈಯಕ್ತಿಕ ಟೀಕೆ ಸರಿಯಲ್ಲ ಎಂದು ಹೇಳಿದ್ದಾರೆ.

ಸಿ.ಟಿ.ರವಿ ಸದನದ ಒಳಗೆ-ಹೊರಗೆ ಎರಡೂ ಕಡೆ ವೈಯಕ್ತಿಕ ಟೀಕೆ ಮಾಡುತ್ತಿದ್ದರು. ಟೀಕೆ ಮಾಡುವಾಗ ವ್ಯಕ್ತಿತ್ವ, ರಾಜಕೀಯ ಮುತ್ಸದ್ದಿತನವನ್ನು ಯೋಚನೆ ಮಾಡಬೇಕು.ಯಾರನ್ನೋ ಮೆಚ್ಚಿಸಲು, ಕ್ಷಣಿಕ ಸುಖಕ್ಕೆ, ಕಾರ್ಯಕರ್ತರ ಮೆಚ್ಚಿಸಲು ವೈಯಕ್ತಿಕ ಟೀಕೆ ಸರಿಯಲ್ಲ. ದೇವೇಗೌಡರಿಗೆ ಸಾಬರಾಗಿ ಹುಟ್ಲಿ ಅನ್ನೋದು, ಸಿದ್ದರಾಮಯ್ಯಗೆ ಸಿದ್ರಾಮುಲ್ಲಾ ಖಾನ್ ಅನ್ನೋದು. ಸಿ.ಟಿ.ರವಿ ಯಾರನ್ನು ಬಿಟ್ಡಿದ್ದಾರೆ, ಯಾರನ್ನೂ ಬಿಟ್ಟಿಲ್ಲ. ಟೀಕೆ ಮಾಡುವಾಗಲು ರಾಜಕೀಯ ಘನತೆ ಮೇಲೆ ಟೀಕೆ ಮಾಡಬೇಕು ಎಂದು ಹೇಳಿದರು.

ಮಾಜಿ ಶಾಸಕ ಎಂಪಿ ಕುಮಾರಸ್ವಾಮಿ ಸಿಟಿ ರವಿ ಬಗ್ಗೆ ಮಾತನಾಡಿ, ಮೂಡಿಗೆರೆ ಕ್ಷೇತ್ರದಲ್ಲಿ ಬಿಜೆಪಿಗೆ ಜೀವ ತುಂಬಿದ್ದೇ ನಾನು. ಸಿಟಿ ರವಿ ನನ್ನನ್ನು ಬಿಜೆಪಿಯಿಂದ ಹೊರ ಕಳಿಸಿದರು. ಆದರೆ, ಸಿಟಿ ರವಿಯನ್ನು ಕ್ಷೇತ್ರದಿಂದಲೇ ಜನ ಹೊರಕಳಿಸಿದ್ದಾರೆ ಎಂದು ಹೇಳಿದ್ದಾರೆ.

ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಸೋಲಿಗೆ ವ್ಯಂಗ್ಯವಾಡಿದ ಎಂಪಿ ಕುಮಾರಸ್ವಾಮಿ,ಸಿಟಿ ರವಿ ದತ್ತಮಾಲೆ, ಅಹಿತಕರ ಘಟನೆ ಮುಂದಿಟ್ಟು ಪ್ರಚಾರ ನಡೆಸಿದರು. ಇನ್ಮುಂದೆ ಸಿಟಿ ರವಿಯ ಈ ವಿಚಾರಗಳು ಕೆಲಸ ಮಾಡುವುದಿಲ್ಲ. ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಮೊಬೈಲ್ ಸ್ವಿಚ್ ಆಫ್ ಮಾಡಲಿಲ್ಲ.ಫೋನ್ ಸ್ವಿಚ್ ಆಫ್ ಮಾಡಿದ್ದಿದ್ದರೆ ಬಿಜೆಪಿಗೆ 50 ಸೀಟ್ ಬರುತ್ತಿರಲಿಲ್ಲ ಎಂದು ಹೇಳಿದ್ದಾರೆ.

ನನ್ನನ್ನು ಬಿಟ್ಟಿದ್ದಕ್ಕೆ ಚಿಕ್ಕಮಗಳೂರು ಜಿಲ್ಲೆಯ 5 ಕ್ಷೇತ್ರ ಹೋಗುತ್ತೆ ಎಂದು ಜನರೇ ಹೇಳಿದ್ದರು. ಜೆಡಿಎಸ್ನಲ್ಲಿ ಬೂತ್ ಕಮಿಟಿ, ಪಕ್ಷ ಸಂಘಟನೆ ಇರಲಿಲ್ಲ. ಹಾಗಾಗಿ ನನಗೆ ಸೋಲುಂಟಾಗಿದೆ. ಈಗ ಎಲ್ಲವನ್ನು ಸರಿಮಾಡಿಕೊಂಡು ಜೆಡಿಎಸ್ ಪಕ್ಷವನ್ನು ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಂಘಟಿಸುವೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆ; ಮಕ್ಕಳು ಆಟವಾಡುವಾಗ ಆಕಸ್ಮಿಕವಾಗಿ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ

ನವದೆಹಲಿ; ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿರುವ ಶಾಕಿಂಗ್ ಘಟನೆ ರಾಷ್ಟ್ರ

Developed by eAppsi.com