ಸಿಎಂ ಬೊಮ್ಮಯಿ ವಿರುದ್ಧ ಕಾಂಗ್ರೆಸ್ ನಿಂದ ಯಾರು ಸ್ಪರ್ಧಿಸಲಿದ್ದಾರೆ ಗೊತ್ತಾ? ಎಐಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸಿಕ್ಕಿದೆ ಮಾಜಿ ಸಚಿವರಿಗೆ ಗ್ರೀನ್ ಸಿಗ್ನಲ್
ಮಾಜಿ ಸಚಿವ, ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಅವರನ್ನು ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಸ್ಪರ್ಧೆಗಿಳಿಸಲು ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಗ್ರೀನ್ ಸಿಗ್ನಲ್ ನೀಡಿದೆ.
ಬೊಮ್ಮಾಯಿ ಸ್ಪರ್ಧಿಸುವ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರದಿಂದ ವಿನಯ್ ಕುಲಕರ್ಣಿ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗಿದೆ.
ಎಐಸಿಸಿ ಕಚೇರಿಯಲ್ಲಿ ಇಂದು ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಕುಲಕರ್ಣಿ ಅವರನ್ನು ಬೊಮ್ಮಾಯಿ ವಿರುದ್ಧ ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ ಎನ್ನಲಾಗಿದೆ. ಇದಕ್ಕೆ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿಯೂ ಒಪ್ಪಿಗೆ ಸೂಚಿಸಿದೆ ಎನ್ನಲಾಗಿದೆ.
ಶಿಗ್ಗಾಂವಿ ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯ ಪ್ರಬಲವಾಗಿದೆ.ಬಸವರಾಜ ಬೊಮ್ಮಾಯಿ, ಕುಲಕರ್ಣಿ ಇದೇ ಸಮುದಾಯದವರಾಗಿದ್ದಾರೆ.
ಎಐಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪಕ್ಷದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿ ಹಲವು ಹಿರಿಯ ನಾಯಕರಿದ್ದರು.