ಬಿಜೆಪಿ ನಾಯಕರಿಗೆ ಕೇಂದ್ರದ ಮೇಲೆ ಒತ್ತಡ ಹಾಕಿ ಅಕ್ಕಿ ಕೊಡಿಸುವಂತೆ ಹೇಳಿದ ಸಿದ್ದರಾಮಯ್ಯ; ಇದಕ್ಕೆ ಮಾಜಿ ಸಿಎಂ ಬೊಮ್ಮಯಿ ಹೇಳಿದ್ದೇನು ಗೊತ್ತಾ?

ಬೆಂಗಳೂರು:ರಾಜ್ಯದ ಬಿಜೆಪಿ ನಾಯಕರು ಕೇಂದ್ರದ ಮೇಲೆ ಒತ್ತಡ ಹಾಕಿ ಅಕ್ಕಿ ನೀಡುವಂತೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಬೆಂಗಳೂರು ನಗರದಲ್ಲಿ ಮಾತನಾಡಿದ ಅವರು,ಹೆಚ್ಚುವರಿ ಅಕ್ಕಿ ನೀಡುವ ವಿಚಾರದಲ್ಲಿ ಕೇಂದ್ರ ರಾಜಕೀಯ ಮಾಡುತ್ತಿದೆ. ಮೊದಲು ಭಾರತೀಯ ಆಹಾರ ನಿಗಮ ಅಕ್ಕಿ ನೀಡುವುದಾಗಿ ಹೇಳಿತ್ತು. ಜೂನ್​ 12ರಂದು ಎಫ್​​ಸಿಐ ಕೂಡ ಪತ್ರ ಬರೆದಿತ್ತು. ಆದರೆ ಇದೀಗ ಎಫ್​ಸಿಐ ಅಕ್ಕಿ ನೀಡಲಾಗಲ್ಲ ಎಂದು ಪತ್ರ ಬರೆದಿದೆ. ಬಡವರ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವುದು ಯಾಕೆ? ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಹೇಳಿದ್ದಾರೆ.

ರಾಜ್ಯ ಬಿಜೆಪಿ ನಾಯಕರಿಗೆ ಬಡವರ ಬಗ್ಗೆ ಕಾಳಜಿ ಇದ್ದರೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ರಾಜ್ಯಕ್ಕೆ ಅಕ್ಕಿ ಕೊಡಿಸಲಿ ಅಂತ ಸವಾಲು ಹಾಕಿದರು.

ಹುಬ್ಬಳ್ಳಿಯ ಛಬ್ಬಿ ಗ್ರಾಮದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿ ಗೆ ಮಾತನಾಡಿದ ಮಾಜಿ ಸಿಎಂ ಬೊಮ್ಮಯಿ ಅಕ್ಕಿ ವಿಷಯವಾಗಿ ಕಾಂಗ್ರೆಸ್ ಸರಕಾರ ಪರ್ಯಾಯ ವ್ಯವಸ್ಥೆ ಮಾಡಬೇಕಿತ್ತು.

ಅಕ್ಕಿಯನ್ನು ಎಲ್ಲಿಂದ ತೆಗೆದುಕೊಳ್ಳಬೇಕು, ಹೇಗೆ ತೆಗೆದುಕೊಳ್ಳಬೇಕು ಎನ್ನುವ ಪ್ರಶ್ನೆ ಇದೆ. ರಾಜ್ಯದ ರೈತರು ಅಕ್ಕಿ ಕೊಡುವುದಕ್ಕೆ ಮುಂದೆ ಬಂದರೆ ಅದನ್ನು ಖರೀದಿ ಮಾಡಬೇಕು.ಒಂದು ವೇಳೆ ಜುಲೈ ಒಂದನೇ ತಾರೀಖಿಗೆ ಅಕ್ಕಿ ಕೊಡದೆ ಹೋದರೆ, ನಾವು ಪ್ರತಿಭಟನೆ ಮಾಡುತ್ತೇವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಟಾಪ್ ನ್ಯೂಸ್