ಬಾಗಲಕೋಟೆ;ಇಬ್ಬರು ಸಹೋದರಿಯರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಬನಹಟ್ಟಿ ಪಟ್ಟಣದ ಸೋಮವಾರ ಪೇಟೆಯ ಕುರುಬರ ಓಣಿಯಲ್ಲಿ ನಡೆದಿದೆ.
ಬೋರವ್ವ(40), ಯಲ್ಲವ್ವ (48) ಮೃತ ದುರ್ದೈವಿಗಳು. ಕಾಡಪ್ಪ ಭುಜಂಗ ಕೊಲೆ ಮಾಡಿದ ಆರೋಪಿ ಎನ್ನಲಾಗಿದೆ. ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಬನಹಟ್ಟಿ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಆರೋಪಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.