16 ವರ್ಷದ ಬಾಲಕನಿಗೆ ಚೂರಿಯಿಂದ ಇರಿತ, ಬಾಲಕ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತ್ಯು

16 ವರ್ಷದ ಬಾಲಕನಿಗೆ ಚೂರಿಯಿಂದ ಇರಿತ, ಬಾಲಕ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತ್ಯು

ನವದೆಹಲಿ;ಈಶಾನ್ಯ ದೆಹಲಿಯ ವೆಲ್ಕಮ್ ಪ್ರದೇಶದಲ್ಲಿ ಕ್ಷುಲ್ಲಕ ಕಾರಣಕ್ಕಾಗಿ 16 ವರ್ಷದ ಬಾಲಕನನ್ನು ಇನ್ನೊಬ್ಬ ಬಾಲಕ ಚಾಕುವಿನಿಂದ ಇರಿದು ಕೊಂದಿದ್ದಾನೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಮಧ್ಯರಾತ್ರಿ 2:15 ರ ಸುಮಾರಿಗೆ, ಜಂತಾ ಕಾಲೋನಿಯಲ್ಲಿ ಬಾಲಕನ ಹೊಟ್ಟೆಗೆ ಇರಿದ ಬಗ್ಗೆ ಪೊಲೀಸ್ ಠಾಣೆಗೆ ಕರೆ ಬಂದಿತ್ತು. ನಂತರ ಪೊಲೀಸ್ ತಂಡವು ಸ್ಥಳಕ್ಕೆ ಧಾವಿಸಿತು.

ಗಾಯಾಳು ಬಾಲಕನಿಗೆ ಪೋಷಕರು ಜಿಟಿಬಿ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ಅವರು ಸುಮಾರು ಮುಂಜಾನೆ 3.19 ರ ವೇಳೆಗೆ ಸಾವು ಘೋಷಿಸಿದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

ಮೃತ ಬಾಲಕನಿಗೆ ಏಳರಿಂದ ಎಂಟು ಬಾರಿಚೂರಿಯಿಂದ ಇರಿಯಲಾಗಿದೆ‌ ಎಂದು ಹೇಳಲಾಗಿದೆ.

ಕ್ಷುಲ್ಲಕ ಕಾರಣಕ್ಕೆ ಮೃತಪಟ್ಟ ಬಾಲಕ ಮತ್ತು ಆತನ ಸ್ನೇಹಿತನ ನಡುವೆ ಗಲಾಟೆಯಾಗಿತ್ತು. ಈ ವೇಳೆ ಆತನ ಸ್ನೇಹಿತ ಹಲವು ಬಾರಿ ಮೃತ ಬಾಲಕನ ಹೊಟ್ಟೆಗೆ ಇರಿದಿದ್ದಾನೆ ಎಂದು ವರದಿಯಾಗಿದೆ.

ಟಾಪ್ ನ್ಯೂಸ್

ಹಿಂದೂ ಯುವತಿಯನ್ನು “ಕೇರಳ ಸ್ಟೋರಿ” ವೀಕ್ಷಿಸಲು ಕರೆದೊಯ್ದ ಸಂಸದೆ ಪ್ರಜ್ಞಾ ಸಿಂಗ್; ಆಕೆ ಸಿನಿಮಾ ನೋಡಿದ ಮರುದಿನವೇ ತನ್ನ ಮುಸ್ಲಿಂ ಪ್ರೇಮಿಯೊಂದಿಗೆ ಪರಾರಿ!- ವರದಿ

ಭೋಪಾಲ್‌; 19 ವರ್ಷದ ಹಿಂದೂ ಸಮುದಾಯದ ನರ್ಸಿಂಗ್ ವಿದ್ಯಾರ್ಥಿನಿ ತನ್ನ ನಿಗದಿಯಾಗಿದ್ದ ಮದುವೆಗೆ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com