ನಾಯಿ ಕಚ್ಚಿದ ವಿಚಾರ ಪೋಷಕರಿಗೆ ಮುಚ್ಚಿಟ್ಟಿದ ಬಾಲಕ ರೇಬಿಸ್‍ನಿಂದ ಸಾವು

ನಾಯಿ ಕಚ್ಚಿದ ವಿಚಾರ ಪೋಷಕರಿಗೆ ಮುಚ್ಚಿಟ್ಟಿದ ಬಾಲಕ ರೇಬಿಸ್‍ನಿಂದ ಸಾವು

ಗಾಜಿಯಾಬಾದ್: ನಾಯಿ ಕಚ್ಚಿದ ಘಟನೆಯನ್ನು ಪೋಷಕರಿಗೆ ಮುಚ್ಚಿಟ್ಟಿದ್ದ 14 ವರ್ಷದ ಬಾಲಕ ರೇಬಿಸ್ ನಿಂದ ಮೃತಪಟ್ಟಿರುವ ಘಟನೆ ವಿಜಯ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಚರಣ್ ಸಿಂಗ್ ಕಾಲೋನಿಯಲ್ಲಿ ನಡೆದಿದೆ.

8ನೇ ತರಗತಿಯ ವಿದ್ಯಾರ್ಥಿ ಶಹವಾಜ್ ಗೆ ಆರೋಗ್ಯ ಹದಗೆಟ್ಟ ಪರಿಣಾಮ ಸೋಮವಾರ ಸಂಜೆ ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.ಆದರೆ ಅಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಶಹವಾಜ್ ಗೆ ಒಂದೂವರೆ ತಿಂಗಳ ಹಿಂದೆ ನೆರೆಮನೆಯ ನಾಯಿ ಕಚ್ಚಿತ್ತು. ಆದರೆ ಈತ ಭಯದಿಂದ ಅದನ್ನು ಪೋಷಕರಿಂದ ಮುಚ್ಚಿಟ್ಟಿದ್ದನು.

ಅಲ್ಲದೆ ಸೆಪ್ಟೆಂಬರ್ 1ರಿಂದ ಊಟ ಮಾಡುವುದನ್ನು ಕೂಡ ನಿಲ್ಲಿಸಿದ್ದಾನೆ. ಮಗನ ವರ್ತನೆಯಿಂದ ಬೇಸತ್ತ ಪೋಷಕರು ಆತನಿಗೆ ವಿಚಾರಿಸಿದ್ದಾರೆ.

ಈ ವೇಳೆ ಆತ ತನಗೆ ತಿಂಗಳ ಹಿಂದೆ ಪಕ್ಕದ ಮನೆಯ ನಾಯಿ ಕಚ್ಚಿರುವ ವಿಚಾರವನ್ನು ಹೇಳಿದ್ದಾನೆ.

ಕೂಡಲೇ ಶಹವಾಜ್ನನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.ಬಳಿಕ ಆತನಿಗೆ ಆಯುರ್ವೇದ ಔಷಧ ಮಾಡಲಾಗಿದೆ.ಆದರೆ ಕೊನೆಗೆ ಬಾಲಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ‌.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ