ಬಿಪಿಎಲ್ ಪಡಿತರ ಚೀಟಿದಾರರಿಗೆ ಹಣದ ಬದಲು ಅಕ್ಕಿ ವಿತರಣೆ?

ಬೆಂಗಳೂರು; ಅನ್ನಭಾಗ್ಯ ಯೋಜನೆಯಡಿ ಮುಂದಿನ ತಿಂಗಳಿನಿಂದ ಬಿಪಿಎಲ್ ಪಡಿತರ ಚೀಟಿದಾರರಿಗೆ ಹಣದ ಬದಲು 10 ಕೆಜಿ ಅಕ್ಕಿ ಸಿಗುವ ಸಾಧ್ಯತೆ ಇದೆ.

ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಕೆ.ಎಚ್.ಮುನಿಯಪ್ಪ ಅವರು, ಅನ್ನಭಾಗ್ಯ ಯೋಜನೆಯಡಿ ಮುಂದಿನ ತಿಂಗಳಿನಿಂದ ಬಿಪಿಎಲ್ ಪಡಿತರ ಚೀಟಿದಾರರಿಗೆ 10 ಕೆಜಿ ಅಕ್ಕಿ ನೀಡುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಅಕ್ಕಿ ವಿತರಣೆ ಸಂಬಂಧ ಟೆಂಡರ್ ಪ್ರಕ್ರಿಯೆ ನಡೆದಿದ್ದು, ಬರ ಪೀಡಿತ ತಾಲೂಕುಗಳಲ್ಲಿ ಹಣದ ಬದಲು ಅಕ್ಕಿಯನ್ನು ವಿತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಸರಕಾರ ಅನ್ನಭಾಗ್ಯ ಯೋಜನೆ ಘೋಷಿಸಿತ್ತು. ಅಕ್ಕಿಯ ಕೊರತೆ ಹಿನ್ನೆಲೆಯಲ್ಲಿ ಕೇಂದ್ರಕ್ಕೆ ಅಕ್ಕಿ ನೀಡಲು ಮನವಿ ಮಾಡಲಾಗಿತ್ತು. ಆದರೆ ಕೇಂದ್ರ ಆಹಾರ ನಿಗಮ ಕರ್ನಾಟಕ ರಾಜ್ಯಕ್ಕೆ ಅಕ್ಕಿ ಪೂರೈಸಲು ನಿರಾಕರಿಸಿದೆ. ಇದರಿಂದಾಗಿ ರಾಜ್ಯದಲ್ಲಿ ಅಕ್ಕಿ ಬದಲು ಪ್ರತಿ ತಿಂಗಳು 170 ರೂ.ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿತ್ತು.

ಟಾಪ್ ನ್ಯೂಸ್