ಕಾರು ಇದ್ದವರ ಬಿಪಿಎಲ್ ಕಾರ್ಡ್ ರದ್ದು? ಗೃಹಸಚಿವರು ಹೇಳಿದ್ದೇನು?

ಶಿವಮೊಗ್ಗ:50,000 ಕೊಟ್ಟರೆ ಕಾರು ಸಿಗುತ್ತದೆ.ಆದ್ದರಿಂದ ಇನ್ನು ಮುಂದೆ ಕಾರು ಇದ್ದವರ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಮುರುಘಾ ಮಠದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು,ಈಗ 50,000 ಹಾಗೂ 1ಲಕ್ಷಕ್ಕೂ ಹಳೆ ಕಾರುಗಳು ಸಿಗುತ್ತವೆ.ಗಾರೆ ಮಾಡುವವರು,ಮೀನು ಹಿಡಿಯುವವರೂ ಕಾರು ತೆಗೆದುಕೊಂಡು ಹೋಗುತ್ತಾರೆ.ಅಂತವರ ಕಾರ್ಡ್ ಸಹಿತ ರದ್ದಾಗಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಈ ವಿಷಯವಾಗಿ ಶಾಸಕ ಎಚ್‌.ಹಾಲಪ್ಪ ಹರತಾಳು ಹಾಗೂ ನಾನು ಮುಖ್ಯಮಂತ್ರಿ ಬಳಿ ಚರ್ಚಿಸಿದ್ದೇವೆ.ಈ ಕಾನೂನಿನಿಂದ ಬಡವರು ಹೊಂದಿರುವ ಕಾರ್ಡ್ ರದ್ದಾಗುತ್ತದೆ.ಅವರ ಜೀವನಾಧಾರಕ್ಕೆ ತೊಂದರೆ ಆಗುತ್ತದೆ ಎಂದು ಮನವರಿಕೆ ಮಾಡಿದ್ದೇವೆ.ಸಿಎಂ ಈ ಕುರಿತು ಆದೇಶ ಹೊರಡಿಸಲಿದ್ದಾರೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್