BREAKING ಒಡಿಶಾದ ಆರೋಗ್ಯ ಸಚಿವರ ಮೇಲೆ 5 ಸುತ್ತಿನ ಗುಂಡಿನ ದಾಳಿ ನಡೆಸಿದ ASI; ಸಚಿವರ ಸ್ಥಿತಿ ಗಂಭೀರ

ಭುವನೇಶ್ವರ: ಒಡಿಶಾದ ಆರೋಗ್ಯ ಸಚಿವ ನಬಾ ಕಿಶೋರ್ ದಾಸ್ ಅವರ ಮೇಲೆ ಎಎಸ್ ಐ ಓರ್ವರು ಗುಂಡಿನ‌ ದಾಳಿ ನಡೆಸಿರುವ ಘಟನೆ ಜಾರ್ಸುಗುಡಾ ಜಿಲ್ಲೆಯ ಬ್ರಜರಾಜನಗರ ಬಳಿಯ ಗಾಂಧಿ ಚೌಕ್ ಬಳಿ ನಡೆದಿದೆ.

ದಾಸ್ ಮೇಲೆ ಕಾರ್ಯಕ್ರಮಕ್ಕೆ ತೆರಳುವಾಗ ಗುಂಡು ಹಾರಿಸಲಾಗಿದೆ. ಅವರ ಎದೆಗೆ ತಗುಲಿದ್ದು ಚಿಂತಾಜನಕ ಸ್ಥಿತಿಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಚಿವರ ಮೇಲೆ ನಾಲ್ಕರಿಂದ ಐದು ಸುತ್ತು ಗುಂಡುಗಳನ್ನು ಹಾರಿಸಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಎಎಸ್‌ಐ ಗೋಪಾಲ್ ದಾಸ್ ಗುಂಡು ಹಾರಿಸಿದ್ದಾರೆ ಎಂದು ವರದಿ ತಿಳಿಸಿದೆ.ಸಚಿವರ ಸ್ಥಿತಿ‌ ಗಂಭೀರವಾಗಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com