ಬೆಂಗಳೂರು: ರಾಜ್ಯದ 24ನೇ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು.
ನಗರದ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಮುಖ್ಯಮಂತ್ರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್, ಪ್ರಿಯಾಂಕಾ ಗಾಂಧಿ, ರಣದೀಪ್ ಸುರ್ಜೇವಾಲ, ಕೆ.ಸಿ.ವೇಣುಗೋಪಾಲ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ನಟ ಕಮಲ್ ಹಾಸನ್, ನಟಿ ರಮ್ಯಾ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದಾರೆ.
ಕಾರ್ಯಕ್ರಮಕ್ಕೆ 1,800 ಮಂದಿ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.
ಪೊಲೀಸ್ ಕಮಿಷನರ್, ಸ್ಪೆಷಲ್ ಟ್ರಾಫಿಕ್ ಕಮಿಷನರ್ ಹಾಗೂ ಇಬ್ಬರು ಜಂಟಿ ಆಯುಕ್ತರು, ಇಬ್ಬರು ಹೆಚ್ಚುವರಿ ಆಯುಕ್ತರು ಮತ್ತು 8 ಮಂದಿ DCPಗಳ ನೇತೃತ್ವದಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು,10 ಮಂದಿ ACP, 28 ಮಂದಿ ಇನ್ಸ್ಪೆಕ್ಟರ್ಗಳ ನಿಯೋಜನೆ ಮಾಡಲಾಗಿದೆ.