ಚುನಾವಣಾ ಪ್ರಚಾರದ ವೇಳೆ BRS ಸಂಸದರಿಗೆ ಚೂರಿ ಇರಿತ; ಆಸ್ಪತ್ರೆಗೆ ರವಾನೆ

ತೆಲಂಗಾಣ ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆ ಪ್ರಚಾರದಲ್ಲಿ ತೊಡಗಿದ್ದ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಅಭ್ಯರ್ಥಿ ಹಾಗೂ ಹಾಲಿ ಸಂಸದ ಪ್ರಭಾಕರ್ ರೆಡ್ಡಿಗೆ ಚಾಕು ಇರಿಯಲಾಗಿದೆ.

ಈ ಘಟಣೆಯು ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯ ದೌಲತಾಬಾದ್ ತಾಲ್ಲೂಕಿನ ಸೂರಂಪಲ್ಲಿ ಗ್ರಾಮದಲ್ಲಿ ನಡೆದಿದೆ.

ಬಿಆರ್‌ಎಸ್ ಅಭ್ಯರ್ಥಿ ಹಾಗೂ ಮೇದಕ್‌ನ ಲೋಕಸಭಾ ಸಂಸದ ಕೋತ ಪ್ರಭಾಕರ್ ರೆಡ್ಡಿ ಮೇಲೆ ದುಷ್ಕರ್ಮಿಯೊಬ್ಬ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ವರದಿಯಾಗಿದೆ.

ದುಬ್ಬಾಕದಿಂದ ಬಿಆರ್‌ಎಸ್ ಅಭ್ಯರ್ಥಿಯಾಗಿದ್ದ ಅವರು ಪ್ರಚಾರ ಮಾಡುವಾಗ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ. ಈ ಘಟನೆಗೆ ಸಂಬಂಧಿಸಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ.

ದಾಳಿಯಲ್ಲಿ ಕೋತಾ ಪ್ರಭಾಕರ ರೆಡ್ಡಿ ಅವರ ಹೊಟ್ಟೆಗೆ ಗಂಭೀರ ಗಾಯಗಳಾಗಿವೆ. ಭದ್ರತಾ ಸಿಬ್ಬಂದಿ ಅವರನ್ನು ಆಸ್ಪತ್ರೆಗೆ ಕರೆದೊಯ್ದರು.

ಆರೋಪಿಯನ್ನು ದುಬ್ಬಾಕ ಕ್ಷೇತ್ರದ ಚೆಪ್ಯಾಳಕು ಗ್ರಾಮದ ರಾಜು ಎಂದು ಪೊಲೀಸರು ಗುರುತಿಸಿದ್ದಾರೆ. ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿ ಕುಡಿತದ ಅಮಲಿನಲ್ಲಿ ಈ ಕೃತ್ಯ ಎಸಗಿದ್ದಾನೆ. ಆತನಿಗೆ ಕೌಟುಂಬಿಕ ಸಮಸ್ಯೆಗಳಿದ್ದವು ಎಂದು ಸಿದ್ದಿಪೇಟೆ ಸಿಪಿ ಶ್ವೇತಾ ತಿಳಿಸಿದ್ದಾರೆ.

ದಾಳಿಯ ನಂತರ ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯು ಯೂಟ್ಯೂಬ್ ಚಾನೆಲ್‌ವೊಂದರಲ್ಲಿ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದನು ಎನ್ನಲಾಗಿದೆ.

ಘಟನೆ ನಡೆದ ತಕ್ಷಣ ಪ್ರಭಾಕರ ರೆಡ್ಡಿ ಅವರನ್ನು ಗಜ್ವೇಲ್‌ನ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿತು. ಹೆಚ್ಚಿನ ಚಿಕಿತ್ಸೆಗಾಗಿ ಸಿಕಂದರಾಬಾದ್‌ನ ಯಶೋದಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಟಾಪ್ ನ್ಯೂಸ್

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೂಡಿ ಹಾಕಿ ಚಿತ್ರಹಿಂಸೆ; ವಿಧ್ಯಾಭ್ಯಾಸಕ್ಕೆಂದು ಕರೆದುಕೊಂಡು ಹೋಗಿ ಮನೆಗೆಲಸ ಮಾಡುವಂತೆ ಬಲವಂತ!

7 ತಿಂಗಳುಗಳಿಂದ ಬಾತ್ರೂಮ್​ನಲ್ಲಿ ಬಂಧಿಯಾಗಿದ್ದ 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕಾದ ಅಧಿಕಾರಿಗಳು