ಬುಲೆಟ್ ಬೈಕ್ ಗೆ ರಾಷ್ಟ್ರಧ್ವಜ ಕಟ್ಟಿ ಕ್ಷೇತ್ರದಲ್ಲಿ ಸುತ್ತಾಡಿದ ಶಾಸಕ

ಬೆಂಗಳೂರು;77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಬುಲೆಟ್ ಬೈಕ್ ಗೆ ರಾಷ್ಟ್ರಧ್ವಜ ಕಟ್ಟಿ ಶಾಸಕ ಆರ್.ಅಶೋಕ್ ಅವರು ತಮ್ಮ ಪದ್ಮನಾಭನಗರ ಕ್ಷೇತ್ರದಲ್ಲಿ ಬೈಕ್ ಸವಾರಿ ಮಾಡಿ ಸುದ್ದಿಯಾಗಿದ್ದಾರೆ.

ಬನಶಂಕರಿಯಲ್ಲಿ ಬುಲೆಟ್ ಬೈಕ್ ರೈಡ್ ಮಾಡುತ್ತಾ ಸಾಗಿದ ಅಶೋಕ್ ಅವರನ್ನು ಅಭಿಮಾನಿಗಳು ಫಾಲೋ ಮಾಡಿದರು.

ಆರ್ ಅಶೋಕ್ ಬುಲೆಟ್ ಬೈಕ್ ರೈಡ್ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಶಾಸಕರ ನಡೆಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಷ್ಯಾ ಪೆಟ್ರೋಲ್ ಬಂಕ್ ನಲ್ಲಿ ಭೀಕರ ಸ್ಪೋಟ

ರಷ್ಯಾ; ಪೆಟ್ರೋಲ್ ಬಂಕ್‌ನಲ್ಲಿ ಭೀಕರ ಸ್ಫೋಟ ಸಂಭವಿಸಿ ಕನಿಷ್ಠ 35 ಜನರು ಮೃತಪಟ್ಟಿದ್ದು, 100 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ರಷ್ಯಾದ ಡಾಗೆಸ್ತಾನ್‌ನಲ್ಲಿ ನಡೆದಿದೆ.

ಸ್ಪೋಟದ ಬಳಿಕ ಪೆಟ್ರೋಲ್ ಬಂಕ್ ಗೆ ಬೆಂಕಿ ವ್ಯಾಪಿಸಿ ಭಾರಿ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಘಟನೆಯಲ್ಲಿ 35 ಮಂದಿ ಮೃತಪಟ್ಟಿದ್ದು ಸುಮಾರು 80ಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ

ಘಟನೆಯಲ್ಲಿ ಮೃತಪಟ್ಟವರಿಗೆ ರಷ್ಯಾ ಅಧ್ಯಕ್ಷ ಪುಟಿನ್ ಸಂತಾಪ ಸೂಚಿಸಿದ್ದು, ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ.

ಘಟನಾ ಸ್ಥಳದಲ್ಲಿ ರಕ್ಷಣಾ ತಂಡ ಕಾರ್ಯಾಚರಣೆ ನಡೆಸುತ್ತಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಟಾಪ್ ನ್ಯೂಸ್