ಖಾಸಗಿ ಬಸ್ & ಬೈಕ್ ನಡುವೆ ಅಪಘಾತ; ಯುವಕ ಮೃತ್ಯು

ಖಾಸಗಿ ಬಸ್ & ಬೈಕ್ ನಡುವೆ ಅಪಘಾತ; ಯುವಕ ಮೃತ್ಯು

ಹೊನ್ನಾಳಿ; ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ
ಹೊನ್ನಾಳಿ ತಾಲೂಕಿನ ಹರಳಹಳ್ಳಿ ಗ್ರಾಮದಲ್ಲಿ ನಡೆದಿದೆ.

ಸತೀಶ್ ಎಂ.ಎಸ್.(24) ಮೃತರು. ಹೊನ್ನಾಳಿ ಕಡೆಯಿಂದ ನ್ಯಾಮತಿಗೆ ತೆರಳುತ್ತಿದ್ದ ಖಾಸಗಿ ಬಸ್ ನ್ಯಾಮತಿ ಪಟ್ಟಣದ ಹೊರ ವಲಯದಲ್ಲಿ ಎದುರಿಗೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿಯಾಗಿದೆ.

ಘಟನೆಯಲ್ಲಿ ಬೈಕ್ ಸವಾರ ಸತೀಶ್ ತೀವ್ರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಸ್ಥಳೀಯರು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಈ ಕುರಿತು ನ್ಯಾಮತಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಟಾಪ್ ನ್ಯೂಸ್