BREAKING ಬಸ್ ಸೇತುವೆಯಿಂದ ಕೆಳಗೆ ಬಿದ್ದು 15 ಮಂದಿ ಮೃತ್ಯು, ಹಲವರಿಗೆ ಗಂಭೀರ ಗಾಯ; ಕೇರಳದ ದೋಣಿ ಅವಘಡದ ಬೆನ್ನಲ್ಲೇ ನಡೆದ ಮತ್ತೊಂದು ದುರಂತ

BREAKING ಬಸ್ ಸೇತುವೆಯಿಂದ ಕೆಳಗೆ ಬಿದ್ದು 15 ಮಂದಿ ಮೃತ್ಯು, ಹಲವರಿಗೆ ಗಂಭೀರ ಗಾಯ; ಕೇರಳದ ದೋಣಿ ಅವಘಡದ ಬೆನ್ನಲ್ಲೇ ನಡೆದ ಮತ್ತೊಂದು ದುರಂತ

ಮಧ್ಯಪ್ರದೇಶ; ಕೇರಳದ ದೋಣಿ ದುರಂತದಲ್ಲಿ 22 ಮಂದಿಯ ಸಾವಿನ ದುರಂತ ಘಟನೆಯ ಬೆನ್ನಲ್ಲೇ
ಇಂದು ಮಧ್ಯಪ್ರದೇಶದಲ್ಲಿ ನಡೆದ ಭೀಕರ ಬಸ್ ಅಪಘಾತದಲ್ಲಿ 15 ಮಂದಿ ಮೃತಪಟ್ಟು 25 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ಸುಮಾರು 70-80 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು 50 ಅಡಿ ಸೇತುವೆಯಿಂದ ಬಿದ್ದು ಅಪಘಾತ ಸಂಭವಿಸಿದೆ.

ಮಧ್ಯಪ್ರದೇಶದ ಖಾರ್ಗೋನ್‌ನಲ್ಲಿ ಸೇತುವೆಯಿಂದ ಬಸ್ ಬಿದ್ದ ಪರಿಣಾಮ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಮತ್ತು 25 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಧರಂ ವೀರ್ ಸಿಂಗ್ ಹೇಳಿದ್ದಾರೆ.

ಮೃತರಲ್ಲಿ 6 ಮಂದಿ ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದ್ದಾರೆ ಎಂದು ವರದಿ ತಿಳಿಸಿದೆ.ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

ಮಧ್ಯಪ್ರದೇಶ ಸರ್ಕಾರ ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ತಕ್ಷಣದ ಆರ್ಥಿಕ ನೆರವು ಘೋಷಿಸಿದೆ. ಅಲ್ಲದೆ, ಗಂಭೀರವಾಗಿ ಗಾಯಗೊಂಡವರಿಗೆ ತಲಾ 50,000 ಹಾಗೂ ಸಣ್ಣಪುಟ್ಟ ಗಾಯಗೊಂಡವರಿಗೆ 25,000 ನೀಡಲಾಗುವುದು ಎಂದು ಘೋಷಿಸಿದೆ.

ಟಾಪ್ ನ್ಯೂಸ್

ಯುಎಇಯಲ್ಲಿ ಲುಲು ಯೂಸುಫ್ ಅಲಿಯ ಸಹೋದರನ ಪುತ್ರಿಯ ವಿವಾಹ; 4 ದಿನಗಳ ಕಾಲ ನಡೆದ ವಿವಾಹದಲ್ಲಿ 1000ಕ್ಕೂ ಅಧಿಕ ಸೆಲೆಬ್ರಿಟಿಗಳು ಭಾಗಿ, ಈ ವರ್ಷ ಯುಎಇಯಲ್ಲಿ ನಡೆದ ಅತಿದೊಡ್ಡ ಮದುವೆಯ ಸಿದ್ದತೆ ಹೇಗಿತ್ತು ಗೊತ್ತಾ?

ಯುಎಇ ನಿವಾಸಿಗಳು ವಾರಾಂತ್ಯದಲ್ಲಿ ಅಬುಧಾಬಿಯಲ್ಲಿ ಅತಿರಂಜಿತ ಸಮಾರಂಭ ಮತ್ತು ವರ್ಷದ ಅತಿದೊಡ್ಡ ವಿವಾಹ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

Developed by eAppsi.com