ಮಂಗಳೂರು; ಬೈಕ್ ಅಪಘಾತದಲ್ಲಿ ಗಾಯಗೊಂಡ ಯುವಕನ ಅಂಗಾಂಗ ದಾನ

ಮಂಗಳೂರು:ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನೋರ್ವನ ಅಂಗಾಂಗ ದಾನ ಮಾಡಿ ಕುಟುಂಬ ಮಾನವೀಯತೆ ಮೆರೆದಿರುವ ಘಟನೆ ನಡೆದಿದೆ.

ತೊಕ್ಕೊಟ್ಟು ಸೇವಂತಿಗುತ್ತು ನಿವಾಸಿ ಭೂಷಣ್ ರೈ ಮೃತ ಯುವಕ.ಅಪಘಾತದ ನಂತರ ಅವರನ್ನು ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅಲ್ಲಿ ಚಿಕಿತ್ಸೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ವೈದ್ಯರು ಗಾಯಾಳು ಯುವಕನ ಮಿದುಳು ನಿಷ್ಕ್ರಿಯಗೊಂಡಿರುವುದನ್ನು ತಿಳಿಸಿದ್ದಾರೆ.

ಈ ವೇಳೆ ಯುವಕನ ಕುಟುಂಬ ಅಂಗಾಂಗ ದಾನ ಮಾಡಿದ್ದಾರೆ.ತೊಕ್ಕೊಟ್ಟುವಿನಿಂದ ಕುತ್ತಾರು ಕಡೆಗೆ ಬರುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದು ಅಪಘಾತವಾಗಿತ್ತು.

ಟಾಪ್ ನ್ಯೂಸ್