ಬೈಂದೂರು: ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳಿದ್ದ ಇಬ್ಬರು ಮೀನುಗಾರರು ಸಮುದ್ರ ಪಾಲಾದ ಘಟನೆ ತಾಲೂಕಿನ ಶಿರೂರು ಭಾಗದ ಅಳ್ವೆಗದ್ದೆಯಲ್ಲಿ ನಡೆದಿದೆ.
ಬೈಂದೂರು ತಾಲೂಕಿನ ಶಿರೂರು ಗ್ರಾಮದ ಕೆಸರಕೋಡಿ ನಿವಾಸಿಗಳಾದ ಗಂಗೊಳ್ಳಿ ಮುಸಾಬ್(22) ಹಾಗೂ ನಝಾನ್(24) ಮೃತಪಟ್ಟ ದುದೈವಿಗಳಾಗಿದ್ದಾರೆ.
ಕಳೆದ ಹಲವು ಸಮಯದಿಂದ ಮೀನುಗಾರಿಕೆ ನಡೆಸುತ್ತಿರುವ ಇವರು ನಿನ್ನೆ ಸಂಜೆ ಕೂಡ ಮೀನುಗಾರಿಕೆಗೆ ತೆರಳಿದ್ದರು. ಸಮುದ್ರ ಪ್ರಕ್ಷುಬ್ದವಾಗಿ ಇರುವ ಕಾರಣ ಇಬ್ಬರು ಮೀನುಗಾರರು ಆಯತಪ್ಪಿ ಬಿದ್ದು ಸಮುದ್ರ ಪಾಲಾಗಿದ್ದಾರೆ.
ತಕ್ಷಣ ಸ್ಥಳೀಯ ಮೀನುಗಾರರು ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ಘಟನಾ ಸ್ಥಳಕ್ಕೆ ಬೈಂದೂರು ಠಾಣಾಧಿಕಾರಿ ನಿರಂಜನ ಗೌಡ,ಅಗ್ನಿಶಾಮಕ ದಳ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ.