ಶಿವಮೊಗ್ಗ; ಮೀಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ; 7 ಮಂದಿ ವಶಕ್ಕೆ, ನಿಷೇಧಾಜ್ಞೆ ಜಾರಿ
ಶಿವಮೊಗ್ಗ: ಮೀಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ. ಶಿವಮೊಗ್ಗ ನಗರದಾದ್ಯಂತ ಸಿಆರ್ಪಿಸಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶಿಸಿದ್ದಾರೆ. ಮುಂಜಾಗ್ರತ ಕ್ರಮವಾಗಿ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಿಷೇಧಾಜ್ಞೆ ಜಾರಿಗೊಳಿಸುವಂತೆ ಪೊಲೀಸ್ ಇಲಾಖೆ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಿಷೇಧಾಜ್ಞೆ ಸಂದರ್ಭ ಐದು ಜನರಿಗಿಂತಲು ಹೆಚ್ಚು ಜನರು ಗುಂಪುಗೂಡುವುದು … Read more