ನಿಜ್ಜರ್ ಸಲಿಂಗಕಾಮಿ( ಗೇ), ಕೆನಡಾ ಪ್ರಧಾನಿ ಅವನನ್ನು ಇಷ್ಟಪಡುತ್ತಿದ್ದರು!; ಬಿಜೆಪಿ ನಾಯಕನ‌ ಪೋಸ್ಟ್ ವೈರಲ್.‌

ನವದೆಹಲಿ; ಬಿಜೆಪಿಯ ಯುವ ಘಟಕ ಭಾರತೀಯ ಜನತಾ ಯುವ ಮೋರ್ಚಾ (ಬಿಜೆವೈಎಂ) ರಾಷ್ಟ್ರೀಯ ಕಾರ್ಯದರ್ಶಿ ತೇಜಿಂದರ್ ಪಾಲ್ ಸಿಂಗ್ ಬಗ್ಗಾ ಅವರು ಸೋಮವಾರ ಚರ್ಚಾಸ್ಪದ ಹೇಳಿಕೆ ನೀಡಿದ್ದು, ಹತ್ಯೆಯಾದ ಸಿಖ್ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಸಲಿಂಗಕಾಮಿ(ಗೇ) ಮತ್ತು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರನ್ನು ಇಷ್ಟಪಡುತ್ತಿದ್ದರು ಎಂದು ಹೇಳಿದ್ದಾರೆ. ಆದರೆ ನಿಜ್ಜರ್‌ ಇನ್ನೊಬ್ಬರಿಗಾಗಿ ಟ್ರುಡೋ ಅವರನ್ನು ದೂರ ಮಾಡಿದ್ದರು. ನಿಜ್ಜರ್ ಕೊಲೆಗೆ ಇದೇ ಕಾರಣವೇ ಎಂದು ಅವರು ‘ಎಕ್ಸ್‌’ನಲ್ಲಿ ಪ್ರಶ್ನಿಸಿದ್ದಾರೆ. ನಿಜ್ಜರ್‌ ಅವರು ಕೆಲ ಪುರುಷರೊಂದಿಗೆ … Read more

ಕಬ್ಬಿಣದ ಪೆಟ್ಟಿಗೆಯಲ್ಲಿ ಮೂವರು ಸಹೋದರಿಯರ ಮೃತದೇಹ ಪತ್ತೆ ಕೇಸ್ ಗೆ ಸ್ಪೋಟಕ ಟ್ವಿಸ್ಟ್

ಕಬ್ಬಿಣದ ಪೆಟ್ಟಿಗೆಯಲ್ಲಿ ಮೂವರು ಸಹೋದರಿಯರ ಮೃತದೇಹ ಪತ್ತೆ ಕೇಸ್ ಗೆ ಸ್ಪೋಟಕ ಟ್ವಿಸ್ಟ್ ಪಂಜಾಬ್;ಕಬ್ಬಿಣದ ಪೆಟ್ಟಿಗೆಯಲ್ಲಿ ಮೂವರು ಹೆಣ್ಣುಮಕ್ಕಳ ಮೃತದೇಹ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು,ಇದೀಗ ಮಕ್ಕಳ ಹೆತ್ತವರನ್ನು ಪೋಷಕರು ಬಂಧಿಸಿದ್ದಾರೆ. ಜಲಾಂಧರ್ನ ಮುಖ್ಸುದನ್ ಪ್ರದೇಶದಲ್ಲಿ ಬಡತನದಿಂದ ಬೇಸತ್ತ ವಲಸೆ ಕಾರ್ಮಿಕ ಸುಶೀಲ್ ಮಂಡಲ್ ಹಾಗೂ ಆತನ ಪತ್ನಿ ಮೀನು ತಮ್ಮ ಮೂವರು ಪುತ್ರಿಯರನ್ನು ಹತ್ಯೆಗೈದಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಸುಶೀಲ್ ಮಂಡಲ್ ಹಾಗೂ ಮೀನು ದಂಪತಿಗೆ ಮೂವರು ಹೆಣ್ಣು ಮಕ್ಕಳು ಸೇರಿದಂತೆ ಐದು ಮಂದಿ … Read more

ಕಾಸರಗೋಡು; 8 ವರ್ಷದ ಬಾಲಕ ಬಾವಿಗೆ ಬಿದ್ದು ಸಾವು

-ಅಬ್ದುಲ್ ರಹಮಾನ್ ಬಾಖವಿರವರ ಪುತ್ರ ಆಶಿಕ್ ಮೃತ ಕಾಸರಗೋಡು: ಎಂಟು ವರ್ಷದ ಬಾಲಕ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಬೇಕಲ ಸಮೀಪದ ಕುನಿಯದಲ್ಲಿ ನಡೆದಿದೆ. ಕುನಿಯ ಹದ್ದಾದ್ ನಗರದ ಅಬ್ದುಲ್ ರಹಮಾನ್ ಬಾಖವಿ ರವರ ಪುತ್ರ ಆಶಿಕ್(8) ಮೃತ ಬಾಲಕ. ಬಾಲಕ ನಾಪತ್ತೆಯಾದ ಹಿನ್ನಲೆಯಲ್ಲಿ ಶೋಧ ನಡೆಸಿದಾಗ ಬಾವಿಗೆ ಬಿದ್ದಿರುವುದು ಕಂಡು ಬಂದಿದ್ದು, ಪರಿಸರ ನಿವಾಸಿಗಳು ಮೇಲಕ್ಕೆತ್ತಿ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಳಿಲ್ಲ. ಬಾಲಕನ ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದೆ.

ಒಂದೇ ಕುಟುಂಬದ ಮೂವರು ರೈಲ್ವೇ ಹಳಿಗೆ ತಲೆ ಕೊಟ್ಟು ಆತ್ಮಹತ್ಯೆ

ತುಮಕೂರು:ಸಾಲಬಾಧೆಗೆ ಬೇಸತ್ತು ಒಂದೇ ಕುಟುಂಬದ ಮೂವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಂಡಿತನಹಳ್ಳಿ ಬಳಿ ನಡೆದಿದೆ. ಸಿದ್ದಗಂಗಯ್ಯ, ಸುನಂದಮ್ಮ, ಗೀತಾ ಆತ್ಮಹತ್ಯೆಗೆ ಶರಣಾದ ದುರ್ದೈವಿಗಳು. ತುಮಕೂರಿನ ಮರಳೂರು ನಿವಾಸಿಯಾಗಿದ್ದ ಸಿದ್ದಗಂಗಯ್ಯ ಕಳೆದ ಎರಡು ವರ್ಷಗಳ ಹಿಂದೆ ಕೆಇಬಿಯಲ್ಲಿ ನಿವೃತ್ತಿ ಹೊಂದಿದ್ದರು. ಸಾಕಷ್ಟು ಸಾಲ ಮಾಡಿಕೊಂಡಿದ್ದ ಸಿದ್ದಗಂಗಯ್ಯ, ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಕೆ.ಸಿ. ಜನರಲ್ ಆಸ್ಪತ್ರೆ ಬಳಿ ಟೀ ಶಾಪ್ ಇಟ್ಟುಕೊಂಡು ಜೀವನ ನಡೆಸುತ್ತಿದ್ದರು. ಸಾಲಗಾರರ ಕಾಟಕ್ಕೆ ಬೇಸತ್ತು ಇಡೀ ಕುಟುಂಬ ಸೋಮವಾರ ಬೆಳಗಿನ ಜಾವವೇ ಆಟೋದಲ್ಲಿ ಪಂಡಿತನಹಳ್ಳಿ … Read more

ಕುಂದಾಪುರ; ಚೂರಿ ಇರಿತಕ್ಕೊಳಗಾಗಿದ್ದ ವ್ಯಕ್ತಿ ಸಾವು

ಕುಂದಾಪುರ; ಚೂರಿ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಖಾರ್ವಿಕೇರಿ ನಿವಾಸಿ ರಾಘವೇಂದ್ರ ಶೇರೆಗಾರ್(42) ಚಿಕಿತ್ಸೆ ಫಲಿಸದೆ ಮಣಿಪಾಲ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ರಾಘು ಅಲಿಯಾಸ್ ರಾಘವೇಂದ್ರ ಶೇರೆಗಾರ್ ಅವರ ಮೇಲೆ ಭಾನುವಾರ ಸಂಜೆ ಸುಮಾರು 7 ಗಂಟೆಗೆ ನ್ಯೂ ಡೆಲ್ಲಿ ಬಜಾರ್ ಅಂಗಡಿಯೆದುರು ವ್ಯಾಗನರ್ ಕಾರಿನಲ್ಲಿ ಬಂದಿದ್ದ ವ್ಯಕ್ತಿಯೊಬ್ಬ ಚೂರಿಯಲ್ಲಿ ಇರಿದು ಪರಾರಿಯಾಗಿದ್ದ. ಗಂಭೀರಗೊಂಡಿದ್ದ ರಾಘುವನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಆರೋಪಿಯನ್ನು ತೀರ್ಥಹಳ್ಳಿ ಮೂಲದ ಶಾಫಿ ಎಂದು ಗುರುತಿಸಲಾಗಿದ್ದು, ಕೆಲವು ದಿನಗಳಿಂದ ಕುಂದಾಪುರದ ಲಾಡ್ಜ್ ಒಂದರಲ್ಲಿ … Read more

ಶಿವಮೊಗ್ಗ; ಮೀಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ; 7 ಮಂದಿ ವಶಕ್ಕೆ, ನಿಷೇಧಾಜ್ಞೆ ಜಾರಿ

ಶಿವಮೊಗ್ಗ: ಮೀಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ. ಶಿವಮೊಗ್ಗ ನಗರದಾದ್ಯಂತ ಸಿಆರ್ಪಿಸಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶಿಸಿದ್ದಾರೆ. ಮುಂಜಾಗ್ರತ ಕ್ರಮವಾಗಿ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಿಷೇಧಾಜ್ಞೆ ಜಾರಿಗೊಳಿಸುವಂತೆ ಪೊಲೀಸ್ ಇಲಾಖೆ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಿಷೇಧಾಜ್ಞೆ ಸಂದರ್ಭ ಐದು ಜನರಿಗಿಂತಲು ಹೆಚ್ಚು ಜನರು ಗುಂಪುಗೂಡುವುದು … Read more

ಮಹಿಳೆಯನ್ನು ಪೊಲೀಸರು ರಸ್ತೆಯಲ್ಲಿ ಎಳೆದೊಯ್ದ ವಿಡಿಯೋ ವೈರಲ್..

ಉತ್ತರಪ್ರದೇಶ; ಪೊಲೀಸರು ದಿವ್ಯಾಂಗ ಮಹಿಳೆಯನ್ನು ಠಾಣೆಯ ಎದುರು ಎಳೆದೊಯ್ದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಉತ್ತರಪ್ರದೇಶದ ಹರ್ದೋಯ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.ಪೊಲೀಸರು ಆಕೆಯ ಮಾನಸಿಕ ಸ್ಥಿತಿ ಸರಿ ಇರಲಿಲ್ಲ ಎಂದು ಹೇಳಿದ್ದಾರೆ. ಪತಿಯ ಬಗ್ಗೆ ದೂರು ನೀಡಲು ಮಹಿಳೆ ಪೊಲೀಸ್ ಠಾಣೆಗೆ ಬಂದಿದ್ದಳು. ಆದರೆ ಅಲ್ಲಿ ಠಾಣೆಯ ಗೋಡೆಯನ್ನು ಹತ್ತಲು ಪ್ರಯತ್ನಿಸಿದ್ದಾಳೆ. ಇದನ್ನು ಗಮನಿಸಿದ ಮಹಿಳಾ ಪೊಲೀಸರು ಅವಳ ಬಳಿ ಹೋಗಿದ್ದಾರೆ. ಈ ವೇಳೆ ಆಕೆ ರಸ್ತೆಯಲ್ಲೇ ಕುಳಿತು ಪ್ರತಿಭಟನೆ ಪ್ರಾರಂಭಿಸಿದ್ದಾರೆ. ಆಗ … Read more

ಪಂಚಾಯತ್ ಅಧ್ಯಕ್ಷೆ ನೇಣು ಬಿಗಿದು ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ

ಪಂಚಾಯತ್ ಅಧ್ಯಕ್ಷೆ ನೇಣು ಬಿಗಿದು ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ ಮಧ್ಯಪ್ರದೇಶ;ಜನಪದ ಪಂಚಾಯತ್ ಅಧ್ಯಕ್ಷೆ ಪೂಜಾ ದಾದು ನೇಣು ಬಿಗಿದು ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಧ್ಯಪ್ರದೇಶದ ಬುರ್ಹಾನ್‌ಪುರ ಜಿಲ್ಲೆಯಲ್ಲಿ ನಡೆದಿದೆ‌. ಬುರ್ಹಾನ್‌ಪುರದ ತಮ್ಮ ನಿವಾಸದಲ್ಲಿ ಪೂಜಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಅವರನ್ನು ಆಸ್ಪತ್ರೆಗೆ ಸಾಗಿಸಿದಾಗ ವೈದ್ಯರು ಆಕೆ ಸಾವನ್ನಪ್ಪಿರುವ ಸಂಗತಿಯನ್ನು ದೃಢಪಡಿಸಿದ್ದಾರೆ. ಖಕ್ನಾರ್​ನ ಜನಪದ ಪಂಚಾಯತ್ ಅಧ್ಯಕ್ಷೆ ದಾದು ಮಾಜಿ ಬಿಜೆಪಿ ಶಾಸಕ ದಿವಂಗತ ರಾಜೇಂದ್ರ ದಾದು ಅವರ ಮಗಳು ಎಂದು ಹೇಳಲಾಗಿದ್ದು, ಈ ಕುರಿತು ಪ್ರಕರಣ … Read more

ಮನೆ ಮುಂದೆ ಆಟವಾಡುತ್ತಿದ್ದ 4 ವರ್ಷದ ಬಾಲಕಿ ಮೇಲೆ ಹರಿದ ಕಾರು; ಬಾಲಕಿ ಮೃತ್ಯು

ಅಲೀನಾ ಮೃತ ಬಾಲಕಿ. ಲಕ್ನೋ;ಮನೆಯ ಹೊರಗೆ ಆಟವಾಡುತ್ತಿದ್ದ ಮಗುವಿನ ಮೇಲೆ ಕಾರು ಹರಿದ ಪರಿಣಾಮ ಮಗು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಲಕ್ನೋದ ಠಾಕೂರ್ಗಂಜ್ ನಲ್ಲಿ ನಡೆದಿದೆ. ಮಗು ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಾಗ ಕಾರು ಮಗುವಿನ ಮೇಲೆ ಪಾಸ್ ಆಗುವ ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮಗುವಿನ ಪೋಷಕರು ಪೊಲೀಸರಿಗೆ ದೂರು ದಾಖಲಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಪೊಲೀಸರು ಆರೋಪಿಗಳನ್ನು ಗುರುತಿಸಲು ಪ್ರಯತ್ನಿಸುತ್ತಿದ್ದಾರೆ. ಮಗುವನ್ನು ನಾಲ್ಕು ವರ್ಷದ ಅಲೀನಾ ಎಂದು ಗುರುತಿಸಲಾಗಿದೆ, ಆಕೆಯು ತನ್ನ … Read more

ಮಂಗಳೂರು; ಮಹೇಶ್ ಬಸ್ ಮಾಲಕ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ

ಮಂಗಳೂರು: ಮಹೇಶ್ ಬಸ್ ಮಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಕದ್ರಿ ಕಂಬಳ ಸಮೀಪದ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಮಹೇಶ್ ಮೋಟಾರ್ಸ್ ಮಾಲೀಕ ಪ್ರಕಾಶ್(40) ಮೃತ ವ್ಯಕ್ತಿ. ಕದ್ರಿ ಕಂಬಳ ಸಮೀಪದ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಹೇಶ್ ಮೋಟಾರ್ಸ್‌ಗೆ ಸೇರಿದ ಅನೇಕ ಸಿಟಿ ಬಸ್‌ಗಳು ಪ್ರತಿದಿನ ಸಂಚರಿಸುತ್ತಿದೆ. ಈ ಕುರಿತು ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. ಪ್ರಕಾಶ್ ಅವರ ಅಕಾಲಿಕ ನಿಧನಕ್ಕೆ ದಕ್ಷಿಣ ಕನ್ನಡ ಬಸ್ … Read more