ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ವಂಚನೆ ಪ್ರಕರಣ; ಚೈತ್ರಾಳನ್ನು ಉಡುಪಿಗೆ ಕರೆತಂದ ಪೊಲೀಸರು

ಉಡುಪಿ:ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ 5 ಕೋಟಿ ವಂಚನೆ ಪ್ರಕರಣದಲ್ಲಿ ಬಂಧಿತ ಚೈತ್ರಾ ಕುಂದಾಪುರಳನ್ನು
ಮತ್ತೊಂದು ವಂಚನೆ ಪ್ರಕರಣದ ತನಿಖೆಗಾಗಿ ಬ್ರಹ್ಮಾವರ ಠಾಣೆಗೆ ಕರೆ ತರಲಾಗಿದೆ.

ಬಟ್ಟೆ ಅಂಗಡಿಯನ್ನು ತೆರೆದುಕೊಡುವುದಾಗಿ ನಂಬಿಸಿ ಐದು ಲಕ್ಷ ರೂಪಾಯಿ ವಂಚನೆ ಮಾಡಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತ ಸುಧೀನ್ ಚೈತ್ರಾ ವಿರುದ್ದ ದೂರು ನೀಡಿದ್ದರು.

ಬಿಜೆಪಿ ಪಕ್ಷದಲ್ಲಿ ಉನ್ನತ ಸ್ಥಾನದಲ್ಲಿರುವ ಸಚಿವರು, ಮಂತ್ರಿಗಳ, ಶಾಸಕರ ನಿಕಟ ಸಂಪರ್ಕವಿದೆ ಎಂದು ಸುಧೀನ್ ನಂಬಿಸಿದ್ದ ಚೈತ್ರಾ 2018-2023ರ ಅವಧಿಯಲ್ಲಿ ಅಂಗಡಿ ನಿರ್ಮಾಣಕ್ಕೆ ಐದು ಲಕ್ಷ ಹಣವನ್ನು ಹಂತ ಹಂತವಾಗಿ ಪಡೆದಿದ್ದು ಮೂರು ಲಕ್ಷವನ್ನು ಚೈತ್ರಾ ಖಾತೆಗೆ ವರ್ಗಾಯಿಸಿದ್ದ. ಉಳಿದ ಎರಡು ಲಕ್ಷ ಹಣವನ್ನು ನಗದು ರೂಪದಲ್ಲಿ ನೀಡಿರುವುದಾಗಿ ದೂರು ದಾಖಲಿಸಿದ್ದರು.

ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ 5 ಕೋಟಿ ರೂ.ವಂಚಿಸಿರುವ ಆರೋಪ ಎದುರಿಸುತ್ತಿರುವ ಚೈತ್ರಾ ಕುಂದಾಪುರ ಪರಪ್ಪನ ಅಗ್ರಹಾರದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದರು.

ಟಾಪ್ ನ್ಯೂಸ್