ಪೊಲೀಸ್ ಜೀಪ್ ನಿಂದ ಇಳಿಯುತ್ತಲೇ ಸ್ಪೋಟಕ ಹೇಳಿಕೆ ಕೊಟ್ಟ ಚೈತ್ರಾ ಕುಂದಾಪುರ

ಬೆಂಗಳೂರು;ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರಿಗೆ ವಂಚಿಸಿದ ಪ್ರಕರಣದಲ್ಲಿ ಸಿಸಿಬಿ ಬಂಧನದಲ್ಲಿರುವ ಚೈತ್ರಾ ಕುಂದಾಪುರ ಪೊಲೀಸರು ಕರೆದುಕೊಂಡು ಹೋಗುವ ವೇಳೆ ಹೇಳಿಕೆಯೊಂದು ನೀಡಿದ್ದಾರೆ.

ಸ್ವಾಮೀಜಿಗಳು ಸಿಕ್ಕಿ ಹಾಕಿಕೊಳ್ಳಲಿ.ಎಲ್ಲಾ ಸತ್ಯ ಗೊತ್ತಾಗುತ್ತೆ ಸರ್.ಸ್ವಾಮೀಜಿ ಸಿಕ್ಕಿ ಹಾಕಿಕೊಂಡ ನಂತರ ದೊಡ್ಡ ದೊಡ್ಡವರ ಹೆಸರುಗಳು ಹೊರ ಬರುತ್ತವೆ. ಇಂದಿರಾ ಕ್ಯಾಂಟೀನ್ ಬಿಲ್ ಪೆಡ್ಡಿಂಗ್ ಇರೋ ಕಾರಣ ಈ ಷಡ್ಯಂತ್ರ ರಚನೆಯಾಗಿದೆ. ಎ1 ಆರೋಪಿ ನಾನೇ ಆಗಿರಬಹುದು. ಸ್ವಾಮೀಜಿ ಸಿಕ್ಕ ನಂತರವೇ ಎಲ್ಲವೂ ಗೊತ್ತಾಗಲಿದೆ ಎಂದು ಚೈತ್ರಾ ಹೇಳಿದ್ದು, ಪೊಲೀಸರು ಆಕೆಯನ್ನು ಕಚೇರಿ ಒಳಗೆ ಕರೆದುಕೊಂಡು ಹೋಗಿದ್ದಾರೆ.

ಬಳ್ಳಾರಿ ಜಿಲ್ಲೆಯ ಹಡಗಲಿಯ ಹಾಲಶ್ರೀ ಸ್ವಾಮೀಜಿಗೆ ಪ್ರಧಾನಿ ಕಚೇರಿಯ ಸಂಪರ್ಕವಿದೆ ಎಂದು ಗೋವಿಂದ ಬಾಬು ಪೂಜಾರಿ ಅವರಿಂದ ಒಂದೂವರೆ ಕೋಟಿ ಹಣ ಹಾಕಿಸಲಾಗಿದೆ. ಗೋವಿಂದ ಪೂಜಾರಿ ಜೊತೆಯಲ್ಲಿ ಚೈತ್ರಾ ಸಹ ಹಡಗಲಿಗೆ ತೆರಳಿ ಸ್ವಾಮೀಜಿಯನ್ನು ಭೇಟಿಯಾಗಿದ್ದಾರೆ.

ಎಸಿಪಿ ರೀನಾ ಸುವರ್ಣ ನೇತೃತ್ವದಲ್ಲಿ ಚೈತ್ರಾ ಕುಂದಾಪುರ ಆಂಡ್ ಗ್ಯಾಂಗ್ ವಿಚಾರಣೆ ನಡೆಯಲಿದೆ.

ಇನ್ನು ಚೈತ್ರಾ ಕುಂದಾಪುರ ಮೋಸ ಮಾಡುವ ಉದ್ದೇಶದಿಂದಲೇ ಮೂವರನ್ನು ಕೇಂದ್ರ ನಾಯಕರು ಎಂದು ಸೃಷ್ಟಿಸಿ ಉದ್ಯಮಿಯಿಂದ ಹಣ ಪೀಕಿರುವ ಬಗ್ಗೆ ದೂರಿನಲ್ಲಿ ಉಲ್ಲೇಖವಾಗಿದೆ.

ಮೋಸಕ್ಕೆ ಒಳಗಾದ ಉದ್ಯಮಿ ಸೆಪ್ಟೆಂಬರ್ 8ರಂದು ಚೈತ್ರಾ ಕುಂದಾಪುರ ವಿರುದ್ಧ ಬಂಡೆಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಈ ಪ್ರಕರಣ ಸಿಸಿಬಿಗೆ ವರ್ಗಾವಣೆ ಆಗಿತ್ತು.

ಟಾಪ್ ನ್ಯೂಸ್