6 ಜನರ ಬಾಳಿಗೆ ಬೆಳಕಾದ ಯುವಕ; ಹೃದಯ ಸೇರಿ 6 ಅಂಗಗಳು ವಿವಿಧ ಆಸ್ಪತ್ರೆಗಳಿಗೆ ರವಾನೆ

ಮೈಸೂರು:ರಸ್ತೆ ಅಪಘಾತವಾಗಿ ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗ ದಾನ ಮಾಡಿ ಕುಟುಂಬ ಸಾವಿನಲ್ಲೂ ಸಾರ್ಥಕತೆ ಮೆರೆದಿದೆ.

27 ವರ್ಷದ ಮಣಿ ಎಂಬ ಯುವಕನ ಮೆದುಳು ನಿಷ್ಕ್ರಿಯ ಗೊಂಡಿದ್ದು, ಅಂಗಾಂಗ ದಾನ ಮಾಡುವ ಮೂಲಕ 6 ಜನರ ಬದುಕಿಗೆ ಬೆಳಕಾಗಿದ್ದಾರೆ.

ಮಣಿ ಅವರ ಹೃದಯ, ಯಕೃತ್ತು, ಎರಡು ಮೂತ್ರಪಿಂಡಗಳು, ಮತ್ತು ಕಾರ್ನಿಯಾಗಳನ್ನು ದಾನ ಮಾಡಲಾಗಿದೆ.ಹೃದಯವನ್ನು ಗ್ರೀನ್ ಕಾರಿಡಾರ್​ ಮೂಲಕ ಬೆಂಗಳೂರಿಗೆ ವರ್ಗಾಯಿಸಲಾಗಿದೆ.

ಚಾಮರಾಜನಗರ ಜಿಲ್ಲೆಯ ಬಂಡಿಗೆರೆ ಗ್ರಾಮದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಣಿ ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದ ಹಿನ್ನೆಲೆ ಅಪೋಲೊ ಬಿಜಿಎಸ್ ಆಸ್ಪತ್ರೆಗೆ ಮಾ.1 ರಂದು ಕರದೊಯ್ಯಲಾಗಿತ್ತು.ಅಲ್ಲಿ ವೈದ್ಯರು ತಪಾಸಣೆ ನಡೆಸಿ ಮೆದುಳು ನಿಷ್ಕ್ರಿಯವಾಗಿರುವುದು ಕಂಡು ಬಂದಿತ್ತು.

ಇದೀಗ ವೈದ್ಯರ ಸಲಹೆ ಮೇರೆಗೆ ಮಣಿ ಕುಟುಂಬ ಅಂಗಾಂಗ ದಾನ ಮಾಡಿ 6 ಜನರ ಬದುಕಿಗೆ ನೆರಳಾಗಿದೆ.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com