ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣ; 6 ಜನರ ವಿರುದ್ಧ ಪ್ರಕರಣ ದಾಖಲು

ಮೈಸೂರು;ಚಾಮುಂಡಿ ಪುರಂನ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡೆತ್​ನೋಟ್ ಆಧಾರದ ಮೇಲೆ 6 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ನಾಲ್ವರನ್ನು ಬಂಧಿಸಲಾಗಿದೆ.

ಕಳೆದ ಭಾನುವಾರ ಚಾಮುಂಡಿ ಪುರಂನ ಮೊದಲನೇ ಮುಖ್ಯರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಮಹದೇವ ಸ್ವಾಮಿ, ಅವರ ಪತ್ನಿ ಅನಿತಾ ಮತ್ತು ಇಬ್ಬರು ಪುತ್ರಿಯರಾದ ಧನಲಕ್ಷ್ಮಿ ಹಾಗೂ ಚಂದ್ರಕಲಾ ಶವವಾಗಿ ಪತ್ತೆಯಾಗಿದ್ದರು.

ಇವರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕಿಸಲಾಗಿತ್ತು. ಕೆ.ಆರ್.ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆತ್ಮಹತ್ಯೆ ಮಾಡಿಕೊಂಡ ಮಹದೇವ ಸ್ವಾಮಿ ಎಪಿಎಂಸಿಯಲ್ಲಿ ತರಕಾರಿ ಮಾರಾಟದ ದಲ್ಲಾಳಿ ಕೆಲಸ ಮಾಡಿಕೊಂಡಿದ್ದರು. ಎಪಿಎಂಸಿ ಮಾರುಕಟ್ಟೆಯಲ್ಲಿ ಚಿಕ್ಕ ಮಳಿಗೆಯ ಹಣಕಾಸಿನ ವಿಚಾರದಲ್ಲಿ ನೊಂದು ಡೆತ್ ನೋಟು ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದರು.

ಆರು ಜನರ ಹೆಸರನ್ನು ಡೆತ್​ನೋಟ್​ನಲ್ಲಿ ಮಹದೇವ ಸ್ವಾಮಿ ಬರೆದಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಟಾಪ್ ನ್ಯೂಸ್