ಚಂದ್ರಯಾನ-3 ಉಡಾವಣೆಗೆ ಕ್ಷಣಗಣನೆ; ಮತ್ತೊಂದು ಐತಿಹಾಸಿಕ ಸಾಧನೆಯತ್ತ ಇಸ್ರೋ ವಿಜ್ಞಾನಿಗಳು

ಶ್ರೀಹರಿಕೋಟ:ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೊ ವಿಜ್ಞಾನಿಗಳು ಭಾರತದ ಬಹು ನಿರೀಕ್ಷಿತ ಚಂದ್ರಯಾನ-3
ಉಡಾವಣೆಗೆ ಕ್ಷಣಗಣನೆ ಮಾಡುತ್ತಿದ್ದಾರೆ.

ಭಾರತೀಯ ಕಾಲಮಾನ ಇಂದು ಮಧ್ಯಾಹ್ನ 2.35ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ನಭಕ್ಕೆ ಹಾರಲಿದೆ.

2019ರಲ್ಲಿ ಚಂದ್ರಯಾನ 2 ಪ್ರಯೋಗ ಮಾಡಲಾಗಿತ್ತು. ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯಬೇಕಿದ್ದ ‘ಚಂದ್ರಯಾನ-2’ರ ವಿಕ್ರಮ್‌ ಲ್ಯಾಂಡರ್‌ ಸಾಫ್ಟ್‌ ಲ್ಯಾಂಡಿಂಗ್‌ ಸಾಧ್ಯವಾಗದೇ ಅಪ್ಪಳಿಸಿ, ವೈಫಲ್ಯ ಕಂಡಿತ್ತು.

ಇದೀಗ ಚಂದ್ರಯಾನ-3 ಉಪಗ್ರಹ ಎಲ್ ವಿಎಂ3 – ಎಂ4 ರಾಕೆಟ್ ನ್ನು ಹೊತ್ತು ಸಾಗಲಿದೆ.ಚಂದ್ರಯಾನ-3 ಲ್ಯಾಂಡರ್, ರೋವರ್ ಮತ್ತು ಪ್ರೊಪಲ್ಷನ್ ಮಾಡ್ಯೂಲ್ ನ್ನು ಹೊಂದಿದ್ದು, ಇದು ಸುಮಾರು 3,900 ಕಿಲೋಗ್ರಾಂಗಳಷ್ಟು ಭಾರವನ್ನು ಹೊಂದಿದೆ.

ಉಪಗ್ರಹ ಇಳಿಯಲು ಗೊತ್ತುಪಡಿಸಿದ ಲ್ಯಾಂಡಿಂಗ್ ಕೇಂದ್ರ ಚಂದ್ರನ ದಕ್ಷಿಣ ಧ್ರುವವಾಗಿದೆ, ಚಂದ್ರನ ಮೇಲ್ಮೈ ಮೇಲೆ ಆಗಸ್ಟ್ 23 ಅಥವಾ 24 ರ ಸುಮಾರಿಗೆ ಲ್ಯಾಂಡಿಂಗ್ ಆಗಬಹುದು ಎಂದು ನಿರೀಕ್ಷಿಸಲಾಗಿದೆ. ಇದು 14 ಭೂಮಿಯ ದಿನಗಳಿಗೆ ಸಮನಾಗಿರುತ್ತದೆ.

ಟಾಪ್ ನ್ಯೂಸ್

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೂಡಿ ಹಾಕಿ ಚಿತ್ರಹಿಂಸೆ; ವಿಧ್ಯಾಭ್ಯಾಸಕ್ಕೆಂದು ಕರೆದುಕೊಂಡು ಹೋಗಿ ಮನೆಗೆಲಸ ಮಾಡುವಂತೆ ಬಲವಂತ!

7 ತಿಂಗಳುಗಳಿಂದ ಬಾತ್ರೂಮ್​ನಲ್ಲಿ ಬಂಧಿಯಾಗಿದ್ದ 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕಾದ ಅಧಿಕಾರಿಗಳು