ಚಂದ್ರನ ಮೇಲೆ ಯಶಸ್ವಿಯಾಗಿ ಲ್ಯಾಂಡ್ ಆದ ವಿಕ್ರಮ್ ಲ್ಯಾಂಡರ್; ವಿಶ್ವದ ಮುಂದೆ ಭಾರತದ ಅದ್ಭುತ ಸಾಧನೆ

ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಚಂದ್ರಯಾನ–3 ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಮೇಲೆ ಲ್ಯಾಂಡಿಂಗ್ ಆಗಿದ್ದು, ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಮಾಡಿದೆ

ಸಂಜೆ 6.04 ಸುಮಾರಿಗೆ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಲ್ಯಾಂಡ್ ಆಗಿದೆ.ಈ ಕೌತುಕದ ಕ್ಷಣವನ್ನು ಇಡೀ ವಿಶ್ವವೇ ಬೆರಗುಗಣ್ಣಿನಿಂದ, ನೋಡುತ್ತಿತ್ತು.

ಎಲ್ ವಿಎಂ ಮಾರ್ಕ್-3 ರಾಕೆಟ್ 2023ರ ಜುಲೈ 14ರಂದು ಉಡಾವಣೆಗೊಂಡಿತ್ತು. ಭೂಮಿಯಿಂದ 3.84 ಲಕ್ಷ ಕಿ.ಮೀ. ದೂರ ಇರುವ ಚಂದ್ರನ ಸಮೀಪಕ್ಕೆ ತೆರಳಲು ವಿಕ್ರಮ್ ಲ್ಯಾಂಡರ್ 45 ದಿನಗಳ ಪ್ರಯಾಣ ಮಾಡಿದೆ.

ಟಾಪ್ ನ್ಯೂಸ್