ಅಂಗನವಾಡಿಯಿಂದ ಬರುತ್ತಿದ್ದ ಬಾಲಕಿ ಮೇಲೆ ಹರಿದ ಟಿಪ್ಪರ್; ಬಾಲಕಿ ಮೃತ್ಯು

ದಾವಣಗೆರೆ;ಅಂಗನವಾಡಿ ಮುಗಿಸಿ ತನ್ನ ಅಜ್ಜಿಯ ಕೈ ಹಿಡಿದುಕೊಂಡು ರಸ್ತೆ ಮೇಲೆ ನಡೆದುಕೊಂಡು ಬರುತ್ತಿದ್ದ ಬಾಲಕಿ ಮೇಲೆ ಟಿಪ್ಪರ್‌ ಲಾರಿ ಹರಿದು ಮೃತಪಟ್ಟ ಘಟನೆ ದಾವಣಗೆರೆ ನಗರದ ಹಳೇ ಕುಂದುವಾಡದಲ್ಲಿ ನಡೆದಿದೆ.

ಚರಸ್ವಿ(3) ಮೃತ ಬಾಲಕಿ. ಈಕೆ ಕುಂದುವಾಡ ಗ್ರಾಮದ ಗಣೇಶ್ ಎಂಬುವವರ ಪುತ್ರಿಯಾಗಿದ್ದಾಳೆ.

ಬಾಲಕಿ ಅಂಗನವಾಡಿ ಮುಗಿಸಿ ಮನೆಗೆ ಅಜ್ಜಿ ಜತೆ ಹೊರಟಿದ್ದಳು.ಈ ವೇಳೆ ವೇಗವಾಗಿ ಬಂದ ಟಿಪ್ಪರ್‌ ಲಾರಿಯು ಬಾಲಕಿಗೆ ಢಿಕ್ಕಿಯಾಗಿ ಬಾಲಕಿಯ ತಲೆ ಮೇಲೆ ಹರಿದಿದೆ.

ಘಟನೆಯಲ್ಲಿ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಲಾರಿ ಚಾಲಕನ ಅಜಾಗರೂಕತೆಯೇ ಈ ಘಟನೆಗೆ ಕಾರಣ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ರಸ್ತೆ ಬಂದ್ ಮಾಡಿ ಗ್ರಾಮಸ್ಥರು ಆಕ್ರೋಶವನ್ನು ಹೊರ ಹಾಕಿದ್ದಾರೆ.ಲಾರಿ ಚಾಲಕ,ಮಾಲೀಕನ ಬಂಧನಕ್ಕೆ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ