BREAKING ಚಾರ್ಮಾಡಿ ಘಾಟಿಯಲ್ಲಿ ಬಸ್ & ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ, ಯುವಕ ಮೃತ್ಯು, ಇನ್ನೋರ್ವನಿಗೆ ಗಾಯ

-ಇರ್ಫಾನ್ ಮೃತ ಯುವಕ.

ಬೆಳ್ತಂಗಡಿ:ಬಸ್‌ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ಓರ್ವ ಮೃತಪಟ್ಟು, ಇನ್ನೋರ್ವ ಗಾಯಗೊಂಡ ಘಟನೆ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಗುಂಡಿ ನಿವಾಸಿ ಇರ್ಫಾನ್ ಮೃತ ಯುವಕ. ದ್ವಿಚಕ್ರ ವಾಹನದಲ್ಲಿದ್ದ ಇನ್ನೋರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಧರ್ಮಸ್ಥಳದಿಂದ ಹೋಗುತ್ತಿದ್ದ ಬಸ್ ಮತ್ತು ಉಜಿರೆ ಕಡೆ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಅಪಘಾತದ ವೇಳೆ ದ್ವಿಚಕ್ರ ವಾಹನ ಸವಾರ ಬಸ್ಸಿನ ಅಡಿಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನೋರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದಾರೆ‌
ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್