ಚಾರ್ಮಾಡಿಯಲ್ಲಿ ರಾತ್ರಿ 10.30ರವರೆಗೆ ತೆರಳದ ಮತಗಟ್ಟೆ ಅಧಿಕಾರಿಗಳು;ಅನುಮಾನಗೊಂಡು ಸೇರಿದ ಜನ, ಗೊಂದಲ- ಲಾಠೀ ಚಾರ್ಜ್

ಚಾರ್ಮಾಡಿ;ಮತದಾನ ಮುಗಿದಿದ್ದರೂ ರಾತ್ರಿ 10:30 ದಾಟಿದರೂ ಮತಗಟ್ಟೆಯ ಅಧಿಕಾರಿಗಳು ತೆರಳಲಿಲ್ಲ ಎಂದು ಸಂಶಯದಿಂದ ಕಾಂಗ್ರೆಸ್ ಕಾರ್ಯಕರ್ತರು ಮತಗಟ್ಟೆಯ ಬಳಿ ಸೇರಿ ಪ್ರಶ್ನಿಸಿದ್ದಾರೆ.

ಚಾರ್ಮಾಡಿಯ ಬೂತ್ ವೊಂದರಲ್ಲಿ ರಾತ್ರಿ 7:20ರವರೆಗೂ ಮತದಾನ ನಡೆದಿತ್ತು. ಆದರೆ ರಾತ್ರಿ 10:30 ದಾಟಿದರೂ ಮತಗಟ್ಟೆಯ ಅಧಿಕಾರಿಗಳು ಅಲ್ಲಿಂದ ತೆರಳಿರಲಿಲ್ಲ.ಒಂದೇ ಒಂದು ಬೂತ್ ನಲ್ಲಿ ಮತದಾನ ವಿಳಂಬವಾಗಿತ್ತು.ಆದರೆ ಚಾರ್ಮಾಡಿ ಪಂಚಾಯತ್ ವ್ಯಾಪ್ತಿಯ ಯಾವುದೇ ಬೂತ್ ಗಳಿಂದ ಮತಯಂತ್ರಗಳನ್ನು ಕೊಂಡೊಯ್ದಿರಲಿಲ್ಲ.‌ಇದರಿಂದ ಕಾರ್ಯಕರ್ತರ ಅನುಮಾನ ಉಂಟಾಗಿದೆ.

ಈ ನಡುವೆ ಉಂಟಾದ ವಿದ್ಯುತ್ ಕೂಡ ತೆಗೆಯಲಾಗಿತ್ತು.ಇದರಿಂದ ಅವ್ಯವಹಾರ ನಡೆಯುತ್ತಿದೆ ಎಂದು
ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿ ಪ್ರಶ್ನಿಸಿ ಅಧಿಕಾರಿಗಳು ಸ್ಪಷ್ಟನೆ ನೀಡದೆ ಅಲ್ಲಿಂದ ತೆರಳಲು ಬಿಡುವುದಿಲ್ಲ ಎಂದು ವಾಹನಗಳನ್ನು ಅಡ್ಡಗಟ್ಟಿದ್ದಾರೆ.

ಈ ವೇಳೆ ಬಿಜೆಪಿ ಕಾರ್ಯಕರ್ತರು ಕೂಡಾ ಜಮಾಯಿಸಿದ್ದು ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.ಬಳಿಕ ಸ್ಥಳಕ್ಕೆ ವಿಶೇಷ ಪೊಲೀಸ್ ತಂಡ ಆಗಮಿಸಿದ್ದು, ಜಮಾಯಿಸಿದ್ದ ಕಾರ್ಯಕರ್ತರನ್ನು ಲಾಠಿ ಬೀಸಿ ಚದುರಿಸಿದ್ದಾರೆ‌.

ಮತಗಟ್ಟೆಯಲ್ಲಿದ್ದ ಅಧಿಕಾರಿಗಳಿಗೆ ಮತಯಂತ್ರ ಪ್ಯಾಕ್ ಮಾಡುವ ಬಗ್ಗೆ ಗೊಂದಲದಿಂದಾಗಿ ತಡವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಆದರೆ ಕಾಂಗ್ರೆಸ್ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

ಪ್ರವೀಣ್ ನೆಟ್ಟಾರು ಪತ್ನಿಗೆ ತೋರಿದ ಮಾನವೀಯತೆ ಫಾಝಿಲ್ & ಮಸೂದ್ ಕುಟುಂಬಕ್ಕೆ ತೋರಿಸುತ್ತಾರ ಸಿದ್ದರಾಮಯ್ಯ?ಬಿಜೆಪಿ ಅವಧಿಯಲ್ಲಿ ಹತ್ಯೆಯಾದ ಯುವಕರಿಬ್ಬರ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲಿ‌ ಕಾಂಗ್ರೆಸ್ಸಿಗರು ಮೌನ?

BIG NEWS ತೀವ್ರಗೊಂಡ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆ, ನೂತನ ಸಂಸತ್ ಭವನಕ್ಕೆ ಮೆರವಣಿಗೆ ತೆರಳಲು ಯತ್ನ; ಸಾಕ್ಷಿ ಮಲಿಕ್, ವಿನೇಶ್ ಪೋಗಟ್ ಸೇರಿ ಹಲವರು ವಶಕ್ಕೆ

ನವದೆಹಲಿ;ನೂತನ ಸಂಸತ್​ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿದ್ದಾರೆ.

Developed by eAppsi.com