ಅನ್ಯಕೋಮಿನ ಜೋಡಿಗೆ ಬೆದರಿಕೆ ಹಾಕಿ ಹಲ್ಲೆಗೆ ಯತ್ನ, ದೂರು ದಾಖಲು

ಚಿಕ್ಕಬಳ್ಳಾಪುರ:ಅನ್ಯಕೋಮಿನ ಜೋಡಿ ಹೋಟೆಲ್ ಗೆ ತೆರಳಿದ ಹಿನ್ನೆಲೆಯಲ್ಲಿ, ಯುವಕರ ಗುಂಪು ಯುವಕನ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ.

ಬುಧವಾರ ಸಂಜೆ ನಗರದ ಚಾಟ್ ಸೆಂಟರ್ನಲ್ಲಿ ಯುವಕರ ಗುಂಪೊಂದು ಭಿನ್ನ ಧರ್ಮದ ಹುಡುಗಿ ಮತ್ತು ಹುಡುಗನಿಗೆ ಬೆದರಿಕೆ ಹಾಕಿದ್ದಾರೆ ಎಂದು ವರದಿಯಾಗಿದೆ.

ಮುಸ್ಲಿಂ ಯುವತಿಯ ಜೊತೆ ಅನ್ಯಕೊಮಿನ ಯುವಕ ಹೊಟೇಲ್ ಗೆ ಆಗಮಿಸಿದ್ದಳು. ಈ ವೇಳೆ ಬಂದ ಗುಂಪೊಂದು ಯುವತಿಯಿಂದ ದೂರ ಇರುವಂತೆ ಯುವಕನಿಗೆ ಬೆದರಿಕೆ ಹಾಕಿದ್ದಾರೆ.ಆದರೆ ಯುವಕ ಅವರ ಮಾತನ್ನು ನಿರ್ಲಕ್ಷ್ಯಿಸಿದ್ದಾನೆ, ಇದರಿಂದ ಆತನ ಮೇಲೆ ಹಲ್ಲೆಗೆ ಯತ್ನಿಸಲಾಗಿದೆಪ ಎನ್ನಲಾಗಿದೆ.

ಯುವಕ ಶಿಡ್ಲಘಟ್ಟ ಮೂಲದವನಾಗಿದ್ದು, ಚಿಕ್ಕಬಳ್ಳಾಪುರದಲ್ಲಿ ಓದುತ್ತಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಆತನ ಸಹಪಾಠಿಯಾಗಿದ್ದ ಯುವತಿ ತನ್ನ ವಿದ್ಯಾಭ್ಯಾಸ ನಿಲ್ಲಿಸಿ ಈಗ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾಳೆ.

ಯುವತಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ಗೆ ತಿಳಿಸಿದ್ದಾರೆ.ಪೊಲೀಸರು ವಿಚಾರಣೆ ಆರಂಭಿಸಿದ್ದು, ಆರೋಪಿಗಳ ಪತ್ತೆಗೆ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

ಟಾಪ್ ನ್ಯೂಸ್

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com