ಕದ್ದ ಬೈಕ್ ನ ಟ್ಯಾಂಕ್‌ ಮೇಲೆ ಪತ್ನಿಯನ್ನು ಕೂರಿಸಿ ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತನೆ; ವಿಡಿಯೋ ವೈರಲ್

ಛತ್ತೀಸ್ ಗಢ;ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತನೆ ಪ್ರಕರಣದಲ್ಲಿ ದಂಪತಿಯನ್ನು ಛತ್ತೀಸ್ಗಢದ ದುರ್ಗ್ ಪ್ರದೇಶದಲ್ಲಿ ಬಂಧಿಸಲಾಗಿದೆ.

ಈ ಕುರಿತ ವೀಡಿಯೊ ವೈರಲ್ ಆಗಿದೆ.ವಿಡಿಯೋದಲ್ಲಿ ಬೈಕ್ ನ ಟ್ಯಾಂಕ್ ನಲ್ಲಿ ಯುವತಿಯನ್ನು ಕೂರಿಸಿಕೊಂಡು
ಕಿಸ್ಸಿಂಗ್‌, ರೊಮ್ಯಾನ್ಸ್‌ ಮಾಡುತ್ತಾ ಸಂಚರಿಸುವುದು ಸೆರೆಯಾಗಿದೆ.

ಈ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಪೊಲೀಸರು ಪರಿಶೀಲನೆಗೆ ಮುಂದಾಗಿದ್ದು, ಕದ್ದ ಬೈಕ್‌ನಲ್ಲಿ ಸವಾರಿ ಮಾಡುತ್ತಿದ್ದರು ಎಂಬ ಮಾಹಿತಿ ಪೊಲೀಸರಿಗೆ ಲಭಿಸಿದೆ.

ಇದೀಗ ಬೈಕ್ ಸಹಿತ ಇಬ್ಬರನ್ನೂ ಬಂಧಿಸಲಾಗಿದೆ ಎಂದು ಎಸ್ಪಿ ಅಭಿಷೇಕ್ ಪಲ್ಲವ್ ತಿಳಿಸಿದ್ದಾರೆ.

ಟಾಪ್ ನ್ಯೂಸ್